ಬ್ರೇಕಿಂಗ್ ನ್ಯೂಸ್
06-10-26 05:36 pm HK News Staffer ಕ್ರೈಂ
ಚಿಕ್ಕಮಗಳೂರು , ಅ.6: ದಸರಾ ರಜೆಯ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು 12 ವರ್ಷದ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ. ಒಂದೇ ಗ್ರಾಮದ ಮೂವರು ಮಕ್ಕಳು ದುರಂತ ಅಂತ್ಯ ಕಂಡಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.
ಮೃತ ಮಕ್ಕಳೆಲ್ಲ ಒಂದೇ ಗ್ರಾಮದವರಾಗಿದ್ದು, ಮೂರು ವಿಭಿನ್ನ ಶಾಲೆಗಳಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಾಲೆಗಳಿಗೆ ದಸರಾ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರಾಗಿ ಕೆರೆಗೆ ಈಜಲು ತೆರಳಿದ್ದರು.
ಗ್ರಾಮದಲ್ಲಿ ಮಹಿಳೆಯರು ಬಟ್ಟೆ ಹಾಗೂ ಪಾತ್ರೆ ತೊಳೆಯಲು ಬಳಸುವ ಕಟ್ಟೆಗಳಿರುವ ಸ್ಥಳದ ಬಳಿ ಮಕ್ಕಳು ಈಜುತ್ತಿದ್ದಾಗ ದುರಂತ ಸಂಭವಿಸಿದೆ. ಕೆರೆಯ ಆಳಕ್ಕೆ ತೆರಳಿದ ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮದ ಜನರು ಕೆರೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಪುಟ್ಟ ಮಕ್ಕಳ ಮೃತದೇಹಗಳನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ದುಃಖದ ವಾತಾವರಣ ನಿರ್ಮಾಣವಾಗಿದೆ.

ಕಳೆದ ವರ್ಷ ಕೆರೆಯಲ್ಲಿ ಹೂಳು ತೆಗೆಯುವ ಕಾಮಗಾರಿ ನಡೆದಿದ್ದರಿಂದ ಕೆರೆಯ ಆಳ ಹೆಚ್ಚಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆರೆಯ ಆಳದ ಬಗ್ಗೆ ಅರಿವಿಲ್ಲದೆ ಮಕ್ಕಳು ಈಜಲು ತೆರಳಿದ್ದೇ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮೂವರು ಮಕ್ಕಳ ಮೃತದೇಹಗಳನ್ನು ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದು, ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Three 12-year-old boys drowned while swimming in a pond at Marle village in Chikkamagaluru taluk during the Dasara school holidays. The three children, who belonged to the same village, were studying in Class 6 at three different schools.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm