ಬ್ರೇಕಿಂಗ್ ನ್ಯೂಸ್
08-10-26 08:07 pm HK News Staffer ಕ್ರೈಂ
ಮೊರ್ಬಿ, ಅ. 8: ಗುಜರಾತ್ನ ಮೊರ್ಬಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ವೇಗವಾಗಿ ಬಂದ ಸರಕು ಸಾಗಣೆ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 23 ಕುರಿಗಳು ಹಾಗೂ 2 ಮೇಕೆಗಳು ಸೇರಿ ಒಟ್ಟು 25 ಪ್ರಾಣಿಗಳು ಮೃತಪಟ್ಟಿವೆ.
ಮಾಳಿಯಾ-ಮಿಯಾಣಾ ಸಮೀಪದ ಕಚ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಾಳಧಾರಿ ಸಮುದಾಯದ ಕುರಿಗಾಹಿಗಳ ಗುಂಪು ಕುರಿ-ಮೇಕೆಗಳ ಹಿಂಡಿನೊಂದಿಗೆ ಕಚ್ ಕಡೆಗೆ ತೆರಳುತ್ತಿದ್ದ ವೇಳೆ, ಹಿಂಡು ಹೆದ್ದಾರಿ ದಾಟುತ್ತಿತ್ತು ಎನ್ನಲಾಗಿದೆ.
ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಏಕಾಏಕಿ ಹಿಂಡಿಗೆ ನುಗ್ಗಿದ್ದು, ಹಲವು ಪ್ರಾಣಿಗಳು ಟ್ರಕ್ನಡಿ ಸಿಲುಕಿವೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 23 ಕುರಿಗಳು ಮತ್ತು 2 ಮೇಕೆಗಳು ಮೃತಪಟ್ಟಿದ್ದು, ಸುಮಾರು 25 ಪ್ರಾಣಿಗಳು ಗಾಯಗೊಂಡಿವೆ ಎಂದು ತಿಳಿದುಬಂದಿದೆ.
ಘಟನೆಯ ಭೀಕರ ದೃಶ್ಯ ಹೆದ್ದಾರಿ ಬದಿಯಲ್ಲಿದ್ದ CCTV ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಕುರಿ-ಮೇಕೆಗಳ ಹಿಂಡು ಹೆದ್ದಾರಿ ದಾಟುತ್ತಿರುವಾಗ ವೇಗವಾಗಿ ಬಂದ ಟ್ರಕ್ ಅವುಗಳತ್ತ ನುಗ್ಗಿ ಡಿಕ್ಕಿ ಹೊಡೆದು ಮುಂದೆ ಸಾಗುವುದು ಕಂಡುಬಂದಿದೆ. ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು, ವೇಗದ ಚಾಲನೆ ಹಾಗೂ ಹೆದ್ದಾರಿಗಳಲ್ಲಿ ಪ್ರಾಣಿಗಳ ಸುರಕ್ಷತೆ ಕುರಿತು ಮತ್ತೊಮ್ಮೆ ಆತಂಕ ಮೂಡಿಸಿದೆ.
A truck crashed into a herd of sheep and goats on the Kandla–Morbi National Highway near Maliya in Gujarat’s Morbi district on October 7. Twenty-three sheep and two goats were killed, and more than 30 animals were injured. CCTV footage captured the impact. #Gujarat #Morbi #Accident
— Siraj Noorani (@sirajnoorani) October 8, 2026
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am