ಬ್ರೇಕಿಂಗ್ ನ್ಯೂಸ್
09-10-26 03:23 pm HK News Staffer ಕ್ರೈಂ
ತ್ರಿಶೂರ್, ಅ.9: ಕೇರಳದ ತ್ರಿಶೂರ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಾಮಾಜಿಕ ಜಾಲತಾಣ ಇನ್‌ಫ್ಲುಯೆನ್ಸರ್ ನಿಶಾ ರಾಫೆಲ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತ್ರಿಶೂರ್ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಲಕನನ್ನು ವೈದ್ಯಕೀಯ ಮತ್ತು ಕಾನೂನು ಪರೀಕ್ಷೆಗಾಗಿ ತ್ರಿಶೂರ್ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪ್ರಾಥಮಿಕ ವೈದ್ಯಕೀಯ ತಪಾಸಣೆಯಲ್ಲಿ ಲೈಂಗಿಕ ದೌರ್ಜನ್ಯದ ಲಕ್ಷಣಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿ ಹಾಗೂ ಇತರ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.
ಇನ್ನೊಂದೆಡೆ, ನಿಶಾ ರಾಫೆಲ್ ಅವರ ಆಪ್ತ ಮೂಲಗಳು ಆರೋಪಗಳನ್ನು ತಳ್ಳಿಹಾಕಿವೆ. ಎರಡು ಫ್ಲಾಟ್‌ಗಳಿಗೆ ಸಂಬಂಧಿಸಿದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಿಶಾ ಮತ್ತು ದೂರುದಾರರ ಕುಟುಂಬದ ನಡುವೆ ಹಿಂದಿನಿಂದಲೂ ಕಾನೂನು ಸಂಘರ್ಷ ಹಾಗೂ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವು ಎಂದು ನಿಶಾ ಪರವಾಗಿರುವವರು ವಾದಿಸಿದ್ದಾರೆ. ಅದೇ ಹತಾಶೆಯಿಂದ ಈ ರೀತಿಯ ಸುಳ್ಳು ದೂರು ನೀಡಲಾಗಿದೆ ಎಂದು ವಾದಿಸುತ್ತಿದ್ದಾರೆ.
ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸುತ್ತಿರುವ ತ್ರಿಶೂರ್ ಪಶ್ಚಿಮ ಠಾಣೆ ಪೊಲೀಸರು, ದೂರು, ವೈದ್ಯಕೀಯ ದಾಖಲೆಗಳು ಮತ್ತು ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 08:41 pm
HK News Staffer
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm
Albert Rego, Body Exhume, Mangalore: ಆಸ್ತಿಗಾಗ...
09-10-26 10:01 am