ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ ವ್ಯಕ್ತಿಗೆ ದೋಖಾ ; ಪೆಹಲ್ಗಾಮ್ ಉಗ್ರ ಕೃತ್ಯದ ಆರೋಪಿಗಳಿಗೆ ಹಣ ನೀಡಿದ್ದಾಗಿ ಆರೋಪಿಸಿ 1.31 ಕೋಟಿ ಪೀಕಿಸಿದ ಖದೀಮರು !

12-10-26 10:36 pm       HK News Desk   ಕ್ರೈಂ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ತಮ್ಮನ್ನು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿ ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ಹೇಳಿ ಒಂದು ಕೋಟಿ 31 ಲಕ್ಷ ರೂಪಾಯಿ ಪೀಕಿಸಿ ವಂಚಿಸಿರುವ ಘಟನೆ ನಡೆದಿದೆ.

ಪುತ್ತೂರು, ಅ.12: ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ತಮ್ಮನ್ನು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿ ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ಹೇಳಿ ಒಂದು ಕೋಟಿ 31 ಲಕ್ಷ ರೂಪಾಯಿ ಪೀಕಿಸಿ ವಂಚಿಸಿರುವ ಘಟನೆ ನಡೆದಿದೆ. 

ಆರೋಪಿಗಳು WhatsApp ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿದ್ದು, ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ. ಇದನ್ನು ನಂಬಿದ ದೂರುದಾರರು ಸೆ.2ರಿಂದ ಅ. 06ರ ವರೆಗೆ ಹಂತ ಹಂತವಾಗಿ ಒಟ್ಟು ₹1,31,50,000/- ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು ಬಳಿಕ ವಂಚನೆಗೀಡಾಗಿದ್ದಾರೆ. 

ಕೊನೆಗೆ, ಇದು ಸೈಬರ್ ವಂಚನೆ ಎಂಬುದನ್ನು ಅರಿತ ದೂರುದಾರರು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಬಗ್ಗೆ CCPS DK ಅ.ಕ್ರ 42/2026U/S 66(C), 66(D) IT Act &126(2), 204, 308(6) 318 (4), 319(2), 351 R/W 3 (5) Of BNS ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.