ಬ್ರೇಕಿಂಗ್ ನ್ಯೂಸ್
14-10-26 12:23 pm HK News Staffer ಕ್ರೈಂ
ಬೆಂಗಳೂರು, ಅ 14: ಒಡಿಶಾದಿಂದ ಕೇರಳಕ್ಕೆ ಕೋಟ್ಯಂತರ ಮೌಲ್ಯದ ಮಾದಕ ಪದಾರ್ಥಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂಬಳಗೋಡು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ವಿಷ್ಣು ಹಾಗೂ ಚಾಂದ್ ಪಾಷಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ಅಂದಾಜು 1.78 ಕೋಟಿ ರೂ. ಮೌಲ್ಯದ ಸುಮಾರು 317 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 6ರಂದು ಕೇರಳದಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಆರ್.ಟಿ.ನಗರದಲ್ಲಿ ಕಾರೊಂದನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಬಳಿಕ ಆ ಕಾರಿನಲ್ಲಿ ಒಡಿಶಾಗೆ ತೆರಳಿ ಅಪರಿಚಿತ ವ್ಯಕ್ತಿಯೋರ್ವನಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿದ್ದರು. ಅದನ್ನು ಬೆಂಗಳೂರು ಮಾರ್ಗವಾಗಿ ಕೇರಳದ ಕುಮಾರಮಂಗಲಂಗೆ ತೆಗೆದುಕೊಂಡು ಹೋಗಿ ಅಲ್ಲಿನ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯೋಜನೆ ರೂಪಿಸಿದ್ದರು. ಅಕ್ಟೋಬರ್ 11ರಂದು ವಾಪಸ್ ಬಂದು ಬೊಮ್ಮಸಂದ್ರದ ಹೋಟೆಲ್ನಲ್ಲಿ ತಂಗಿದ್ದ ಆರೋಪಿಗಳು ಮಾರನೇ ದಿನ ಕೇರಳದ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನಗರದಲ್ಲಿ ಮಾದಕ ವಸ್ತುಗಳ ತಡೆಗೆ ತೀವ್ರ ನಿಗಾ ವಹಿಸಲಾಗಿದೆ. ಒಡಿಶಾದಲ್ಲಿ ಗಾಂಜಾ ಪೂರೈಸಿದವರು ಯಾರು ಹಾಗೂ ಕೇರಳದಲ್ಲಿ ಇದನ್ನು ಯಾರಿಗೆ ತಲುಪಿಸಲು ಉದ್ದೇಶಿಸಲಾಗಿತ್ತು ಎಂಬ ಬಗ್ಗೆ ತನಿಖೆ ಮುಂದುವರೆದಿದೆ" ಎಂದು ತಿಳಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm