ಬ್ರೇಕಿಂಗ್ ನ್ಯೂಸ್
17-10-26 11:09 am HK News Staffer ಕ್ರೈಂ
ಮಂಗಳೂರು, ಅ.17: ಜೋಕಟ್ಟೆ ಬಳಿಯ ಎಂಆರ್ ಪಿಎಲ್ ಮೂರನೇ ಹಂತದ ಘಟಕದಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಘಟನೆಯಲ್ಲಿ ತೀವ್ರ ಸುಟ್ಟ ಗಾಯಗೊಂಡಿದ್ದ ಸುರತ್ಕಲ್ ಮೇಲ್ಸೇತುವೆ ಬಳಿಯ ನಿವಾಸಿ ರಾಜೇಶ್ ಬ್ಯಾಪ್ಟಿಸ್ಟ್ (38) ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಜೇಶ್ ಅವಿವಾಹಿತರಾಗಿದ್ದು ತಂದೆ, ತಾಯಿ ತೀರಿಕೊಂಡಿದ್ದಾರೆ. ಸೋದರನಿದ್ದು ಇತರ ಕುಟುಂಬ ಸದಸ್ಯರು ಮಂಗಳೂರಿನ ಅವರನ್ನು ಆಸ್ಪತ್ರೆಯಲ್ಲಿ ನೋಡಿಕೊಂಡಿದ್ದರು. ವಾರದ ಹಿಂದೆ ಸ್ವಲ್ಪ ಚೇತರಿಕೆ ಕಂಡಿದ್ದಾರೆಂದು ಮಾಹಿತಿಗಳಿದ್ದವು. ಮುಖ ಮತ್ತು ಎದೆಯ ಭಾಗದಲ್ಲಿ ಹೆಚ್ಚು ಸುಟ್ಟ ಗಾಯಗಳಿದ್ದರಿಂದ ಸುಸ್ಥಿತಿಗೆ ಮರಳದೆ ಅಂಗಾಂಗ ವೈಫಲ್ಯದಿಂದಾಗಿ ಮೃತಪಟ್ಟಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಂಆರ್ ಪಿಎಲ್ ಮೂರನೇ ಹಂತದ ವಿಸ್ತರಣಾ ಘಟಕದಲ್ಲಿ ಸೆ.30ರಂದು ಮಧ್ಯಾಹ್ನ ಹಠಾತ್ ಸ್ಫೋಟ ಘಟನೆ ನಡೆದಿತ್ತು. ಸ್ಫೋಟದಲ್ಲಿ ಮುಲ್ಕಿ ಹಳೆಯಂಗಡಿ ನಿವಾಸಿಯಾಗಿದ್ದ ನೌಕರ ಮನೀಶ್ ಕರ್ಕಡ (23) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಾಜೇಶ್ ಅವರಿಗೆ 35 ಶೇಕಡಾ ಸುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿದ್ದಾಗಿ ಪೊಲೀಸರು ತಿಳಿಸಿದ್ದರು. ಇತರೇ ಎಂಟು ಮಂದಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದವು. ಒಮ್ಮಿಂದೊಮ್ಮೆಲೇ ಸ್ಫೋಟಗೊಂಡು ಭಾರೀ ಹೊಗೆ ಆವರಿಸಿದ್ದರಿಂದ ಮತ್ತು ಭಾರೀ ಸ್ಫೋಟದ ಸದ್ದು ಸುತ್ತಲಿನ ಮಂಗಳೂರು, ಬಜ್ಪೆ ಸೇರಿ ಆಸುಪಾಸಿನಲ್ಲಿ ಕೇಳಿದ್ದರಿಂದ ಜನರಲ್ಲಿ ಆತಂಕ ಉಂಟಾಗಿತ್ತು.
ಮೃತ ಮನೀಶ್ ಕರ್ಕಡ ಕುಟುಂಬಕ್ಕೆ ಎಂಆರ್ ಪಿಎಲ್ ಸಂಸ್ಥೆಯಿಂದ ಒಂದು ಕೋಟಿ ಪರಿಹಾರ ನೀಡಲಾಗಿತ್ತು. ರಾಜೇಶ್ ಕುಟುಂಬಕ್ಕೂ ಅಷ್ಟೇ ಮೊತ್ತದ ಪರಿಹಾರ ಸಿಗುವ ಸಾಧ್ಯತೆ ಇದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am