Actor Tiger Shroff Shot: ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ; ಬೈಕಿನಲ್ಲಿ ಬಂದಿದ್ಧ ಮೂವರ ಕೃತ್ಯ, ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನವರೆಂದು ವಿಡಿಯೋ ಬಿಡುಗಡೆ 

19-10-26 12:40 am       HK News Staffer   ಕ್ರೈಂ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಮುಂಬೈನ ಜುಹು ಪ್ರದೇಶದ ಪುಷ್ಪ ಪಾರ್ಕ್ ಬಳಿ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ ಬಂದಿದ್ದ ಮೂವರು ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ. 

ಮುಂಬೈ, ಅ.18: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಮುಂಬೈನ ಜುಹು ಪ್ರದೇಶದ ಪುಷ್ಪ ಪಾರ್ಕ್ ಬಳಿ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ ಬಂದಿದ್ದ ಮೂವರು ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ. 

350 ಮೀಟರ್ ದೂರದಿಂದ ಏಳು ಸುತ್ತು ಗುಂಡು ಹಾರಾಟ ಆಗಿದೆ. ಈ ವೇಳೆ, ಟೈಗರ್ ಶ್ರಾಫ್ ಅವರು ಯಾವುದೇ ಗಾಯಗಳಿಲ್ಲದೆ ಪಾಯದಿಂದ ಪಾರಾಗಿದ್ದಾರೆ. ಅವರ ಕಾರು ಚಾಲಕ ಮತ್ತು ಸ್ಥಳದಲ್ಲಿದ್ದ ಆಟೋರಿಕ್ಷಾ ಚಾಲಕ ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ. 

ಇದರ ಬೆನ್ನಲ್ಲೇ ಅನಿಲ್ ಪಂಡಿತ್ ಮತ್ತು ಹರ್ಮನ್ ಸಂಧು ಎಂಬ ವ್ಯಕ್ತಿಗಳು ತಾವು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನವರು ಎಂದು ಹೇಳಿಕೊಂಡು ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದು ದಾಳಿಯ ಹೊಣೆ ಹೊತ್ತುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರೊಂದಿಗೆ ನಂಟು ಹೊಂದಿರುವವರು ಮತ್ತು ತಮ್ಮ ಎಚ್ಚರಿಕೆಗಳನ್ನು ಪಾಲಿಸದವರ ವಿರುದ್ಧ ಈ ದಾಳಿ ನಡೆಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದು, 15 ವಿಶೇಷ ತಂಡಗಳನ್ನು ರಚಿಸಿದ್ದಾರೆ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.