ಬ್ರೇಕಿಂಗ್ ನ್ಯೂಸ್
24-10-26 12:51 pm HK News Staffer ಕ್ರೈಂ
ಮಂಗಳೂರು, ಅ.24: ಗಂಡನೇ ತನ್ನ ಪತ್ನಿಯನ್ನು ಹೊಡೆದು ಕೊಲೆಗೈದು ಮುಚ್ಚಿಟ್ಟ ಆರೋಪ ಕೇಳಿಬಂದಿದ್ದು ಬಂಟ್ವಾಳ ಪೊಲೀಸರು ಬೆಳಗಾವಿ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಳಗಾವಿ ಅಥಣಿ ನಿವಾಸಿ ಅರುಣ್ ಮಹಾದೇವ್ ದೇಸಂಗಿ (26) ಎಂಬವರ ದೂರಿನಂತೆ, ಆರೋಪಿ ಜಮಖಂಡಿ ನಿವಾಸಿ, ಬಂಟ್ವಾಳದ ವಗ್ಗದಲ್ಲಿ ವಾಸವಿದ್ದ ಸಂಜೀವ ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಅರುಣ್ ಅವರ ತಂಗಿ ಸುನೀತಾ ದೇಸಂಗಿ (34) ಎಂಬವರನ್ನು ಬಾಗಲಕೋಟೆ, ಜಮಖಂಡಿ ನಿವಾಸಿ ಆರೋಪಿತ ಸಂಜೀವಕುಮಾರ್ (36) ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು, ದಂಪತಿ ಬಂಟ್ವಾಳ ವಗ್ಗ ಎಂಬಲ್ಲಿ ವಾಸವಿದ್ದರು. ದಂಪತಿ ನಡುವೆ ಈ ಹಿಂದೆ ಹಲವು ಬಾರಿ ವೈವಾಹಿಕ ಕಲಹ ನಡೆಯುತ್ತಿದ್ದು, ಸಂಬಂಧಿಕರು ಸೇರಿ ರಾಜಿ ಸಂಧಾನ ಮಾಡಿದ್ದರು. ಈ ನಡುವೆ, ಸುನೀತಾ ಹೆರಿಗೆಯಾಗಿ ತವರು ಮನೆಯಲ್ಲಿದ್ದು ಆರೋಪಿ ಸಂಜೀವ ಅ.4 ರಂದು ಬಂಟ್ವಾಳದ ತನ್ನ ಮನೆಗೆ ಕರೆತಂದಿದ್ದ.
ಮೊನ್ನೆ ಅ.22 ರಂದು ಸುನೀತಾರವರು ಅಣ್ಣ ಅರುಣ್ ಗೆ ಕರೆ ಮಾಡಿ, ಗಂಡ ಕಿರುಕುಳ ನೀಡಿ ಹಲ್ಲೆ ನಡೆಸುತ್ತಿರುವ ಬಗ್ಗೆ ತಿಳಿಸಿದ್ದ. ಮರುದಿನ 23ರಂದು ಮುಂಜಾನೆ ಆರೋಪಿ ಸಂಜೀವ, ಭಾವ ಅರುಣ್ ಗೆ ಕರೆ ಮಾಡಿ ಸುನೀತಾ ಅರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ತಿಳಿಸಿದ್ದ. ಆದರೆ ಅರುಣ್ ಬಂದು ನೋಡಿದಾಗ, ಸುನಿತಾ ಮೃತಪಟ್ಟಿದ್ದು, ಶರೀರವನ್ನು ನೋಡಿದಾಗ ಹಲ್ಲೆ ನಡೆಸಿದ ಗಾಯಗಳು ಹಾಗೂ ರಕ್ತ ಕಂಡುಬಂದಿತ್ತು.
ಆರೋಪಿ ಸಂಜೀವಕುಮಾರ್ ಪತ್ನಿ ಸುನಿತಾಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುತ್ತಾನೆ ಎಂಬುದಾಗಿ ಅರುಣ್ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 142/2026, ಕಲಂ:103 BNS 2023 ರಂತೆ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
24-10-26 12:22 pm
HK News Staffer
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
ಬಿಲ್ ಬಾಕಿಯಿದ್ದರೂ ಮೃತದೇಹ ತಡೆಹಿಡಿಯುವಂತಿಲ್ಲ: ಖಾಸ...
23-10-26 02:53 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 01:59 pm
HK News Staffer
Subbanna Pandit, Folk Academy Award: 45 ವರ್ಷಗ...
24-10-26 12:19 pm
Soujanya Case, SIT: ಸೌಜನ್ಯಾ ಕೊಲೆ ಪ್ರಕರಣದ ಮರು...
23-10-26 05:48 pm
19 ಗಂಟೆ 29 ನಿಮಿಷಗಳ ಸಾಧನೆ: 2,000 ಮೆಹಂದಿ ಕೋನ್ ತ...
23-10-26 02:56 pm
Builder Donald Pinto Fraud: ಮಾರ್ನಮಿಕಟ್ಟೆ ಸರ್ಕ...
22-10-26 09:37 pm
24-10-26 12:51 pm
HK News Staffer
ಪುಲಿಕೇಶಿ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ;...
23-10-26 05:48 pm
B Care Company, Madhumita Kaur: ಇನ್ಶೂರೆನ್ಸ್ ಪ...
22-10-26 03:21 pm
ಮೂಡುಬಿದಿರೆಯಲ್ಲಿ ಕರುಣಾಜನಕ ದುರಂತ ; ಮಗನನ್ನು ರಕ್ಷ...
22-10-26 01:03 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಂತಿದ್ದ ಗ್ಯಾಸ್ ಟ್...
22-10-26 01:01 pm