ಬ್ರೇಕಿಂಗ್ ನ್ಯೂಸ್
24-10-26 10:21 pm HK News Desk ಕ್ರೈಂ
ಬೆಂಗಳೂರು, ಅ.24 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಿಡಿಯೋವನ್ನು ಮೊದಲಿಗೆ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ ಎನ್ನಲಾದ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಬಂಧಿಸಿದ್ದಾರೆ.
ವಿಡಿಯೊ ಅಪ್ಲೋಡ್ ಮಾಡುವುದಕ್ಕಾಗಿಯೇ ರಿತೇಶ್ ಪಾಂಡೆ ದೆಹಲಿಯ ಕರೋಲ್ ಬಾಗ್ ಮಾರುಕಟ್ಟೆಯಿಂದ ₹15 ಸಾವಿರ ನೀಡಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಖರೀದಿಸಿದ್ದ. ಸಿಮ್ ಕಾರ್ಡ್ ಬಳಸದೆ ವೈ-ಫೈ ಸಂಪರ್ಕದ ಮೂಲಕ ವಿಡಿಯೋ ಅಪ್ಲೋಟ್ ಮಾಡಲಾಗಿತ್ತು. ಆರೋಪಿ ಮೊಬೈಲ್ ಖರೀದಿಸಿದ ಅಂಗಡಿಯ ಬಿಲ್ ಹಾಗೂ ಅಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ಆರೋಪಿಗೆ ಅದಕ್ಕೂ ಮೊದಲೇ ತಲುಪಿಸಲಾಗಿದ್ದ ಪೆನ್ಡ್ರೈವ್ ಅನ್ನು ಮೊಬೈಲ್ಗೆ ಜೋಡಿಸಿ ಡೌನ್ಲೋಡ್ ಮಾಡಿಕೊಂಡಿದ್ದ ಎಂದೂ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಬಳಿಕ ‘ಕರ್ನಾಟಕ ಹನಿಟ್ರ್ಯಾಪ್’ ಹೆಸರಿನ ಯೂಟ್ಯೂಬ್ ಖಾತೆ ತೆರೆದು ಅದರ ಮೂಲಕ ಸ್ಟಿಂಗ್ ವಿಡಿಯೋವನ್ನು ಅಪ್ಲೋಡ್ ಮಾಡಿರುವುದು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ. ವಿಡಿಯೊ ಅಪ್ಲೋಡ್ ಮಾಡಲು ಆರೋಪಿಗೆ ₹50 ಸಾವಿರ ನೀಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಪೆನ್ಡ್ರೈವ್ ನೀಡಿದವರು ಹಾಗೂ ಹಣ ವರ್ಗಾವಣೆ ಮಾಡಿದವರ ಕುರಿತು ತನಿಖೆ ನಡೆಸಲಾಗಿದೆ.
ಸ್ಟಿಂಗ್ ವಿಡಿಯೊದಲ್ಲಿ ಕಾಣಿಸಿಕೊಂಡ ಮಹಿಳೆಯನ್ನು ಈಗಾಗಲೇ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿದ್ದಾರೆ. ವಿಡಿಯೊ ರೆಕಾರ್ಡ್ ಮಾಡಿದವರು ಯಾರು ಮತ್ತು ಈ ಕಾರ್ಯಾಚರಣೆಯ ಹಿಂದಿನ ಹಣಕಾಸಿನ ವ್ಯವಹಾರಗಳೇನು ಎಂಬ ಬಗ್ಗೆ ಆಕೆಯಿಂದ ಮಾಹಿತಿ ಕಲೆಹಾಕಲಾಗಿದೆ. ಮತ್ತೊಂದೆಡೆ, ಬಂಧಿತ ರಿತೇಶ್ ಪಾಂಡೆಯನ್ನು 66ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ತನಿಖೆಗೆ ಸಹಕರಿಸಬೇಕು ಮತ್ತು ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಸದ್ಯ ತಾಂತ್ರಿಕ ಕೊಂಡಿಯೊಂದು ಬಲೆಗೆ ಬಿದ್ದಿದ್ದರೂ, ಸ್ಟಿಂಗ್ ಮಾಡಿರುವ ಅಸಲಿ ಕಿಂಗ್ಪಿನ್ಗಳ ಬಂಧನ ಇನ್ನಷ್ಟೇ ಆಗಬೇಕಾಗಿದೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 10:59 pm
HK News Staffer
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
Subbanna Pandit, Folk Academy Award: 45 ವರ್ಷಗ...
24-10-26 12:19 pm
25-10-26 01:44 pm
HK News Staffer
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm
ಸಿದ್ದರಾಮಯ್ಯ ಸ್ಟಿಂಗ್ ; ಜಾಲತಾಣದಲ್ಲಿ ವಿಡಿಯೋ ಅಪ್ಲ...
24-10-26 10:21 pm
ಸ್ಟಿಂಗ್ ಆಪರೇಶನ್ ; ಕೇರಳದಲ್ಲಿ ಸಂತ್ರಸ್ತ ಮಹಿಳೆಯ ಹ...
24-10-26 05:17 pm
ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ ; ಭೂಗತ ಪಾತಕಿ...
24-10-26 05:00 pm