ಬ್ರೇಕಿಂಗ್ ನ್ಯೂಸ್
26-10-26 12:49 pm HK News Staffer ಕ್ರೈಂ
ಕುಂದಾಪುರ, ಅ.26 : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕೋಟ ಅಮೃತೇಶ್ವರಿ ಸರ್ಕಲ್ನಲ್ಲಿ ಕಾರು ಡಿಕ್ಕಿಯಾಗಿ ಸೈಕಲ್ ಸವಾರ, ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ಹಾಗೂ ಕಾರ್ಪೊರೇಷನ್ ಬ್ಯಾಂಕ್ ನಿವೃತ್ತ ಉದ್ಯೋಗಿ ಗುರುದಾಸ್ ಶೆಣೈ (65) ಮೃತಪಟ್ಟಿದ್ದಾರೆ. ಸೋಮವಾರ ಬೆಳಗಿನ ಜಾವ ಹೂವು ಸಂಗ್ರಹಿಸಿ ಸೈಕಲ್ ನಲ್ಲಿ ದೇವಸ್ಥಾನಕ್ಕೆ ತೆರಳುವ ನಿತ್ಯದ ಕೆಲಸದಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಗುರುದಾಸ್ ಶೆಣೈ ಪ್ರತಿದಿನ ಮುಂಜಾನೆ ಸ್ಥಳೀಯ ಪರಿಸರದಲ್ಲಿ ಹೂವು ಸಂಗ್ರಹಿಸಿ ದೇವಸ್ಥಾನಕ್ಕೆ ನೀಡುತ್ತಿದ್ದರು. ಸೋಮವಾರವೂ ಹೂವು ಸಂಗ್ರಹಿಸಿಕೊಂಡು ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿಯಿಂದ ಕುಂದಾಪುರದ ಕಡೆಗೆ ಸಂಚರಿಸುತ್ತಿದ್ದ ಕಾರು ಸೈಕಲ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ, ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುದಾಸ್ ಶೆಣೈ ಅವರು ಕಾರ್ಪೊರೇಷನ್ ಬ್ಯಾಂಕ್ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಆರ್ಎಸ್ಎಸ್ನ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಯುವ ಸ್ವಯಂಸೇವಕರಿಗೆ ಶಾಖೆಗಳನ್ನು ನಡೆಸುತ್ತಿದ್ದರು. ಭಾನುವಾರ ಕೋಟದಲ್ಲಿ ನಡೆದ ವಿಜಯದಶಮಿ ಪಥಸಂಚಲನದಲ್ಲಿಯೂ ಉತ್ಸಾಹದಿಂದ ಭಾಗವಹಿಸಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
26-10-26 11:55 am
HK News Staffer
Rahul Gandhi, Siddaramaiah: ಸ್ಟಿಂಗ್ ಆಪರೇಶನ್ ;...
26-10-26 11:53 am
ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ...
24-10-26 05:35 pm
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
25-10-26 10:26 pm
HK News Desk
ಸ್ಟಿಂಗ್ ರಾಜಕೀಯ, ಸಿಎಂ ಬದಲಾವಣೆ ಕಾಂಗ್ರೆಸಿಗೆ ಹಿನ್...
25-10-26 08:25 pm
ಯುಪಿಐ ಮೇಲಿನ ತೆರಿಗೆ ಪ್ರಸ್ತಾಪಕ್ಕೆ ಅಣ್ಣಾಮಲೈ ವಿರೋ...
24-10-26 10:59 pm
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
26-10-26 12:49 pm
HK News Staffer
ಬೀದರಿನಲ್ಲಿ ಮತ್ತೊಂದು ಎಟಿಎಂ ಕತ್ತರಿಸಿ 23 ಲಕ್ಷ ದರ...
25-10-26 04:33 pm
ಐಷಾರಾಮಿ ಜೀವನಕ್ಕಾಗಿ ಹದಿಹರೆಯದ ಯುವಕರ ದುಷ್ಕೃತ್ಯ ;...
25-10-26 02:49 pm
ಕುಂದಾಪುರ ; ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕ...
25-10-26 01:44 pm
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm