ಬ್ರೇಕಿಂಗ್ ನ್ಯೂಸ್
29-10-26 01:14 pm HK News Staffer ಕ್ರೈಂ
ಮಂಗಳೂರು, ಅ.29 : ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯ ತಲಾ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ, ನಾಲ್ವರಿಗೆ ಒಟ್ಟು ₹88,000 ದಂಡವನ್ನೂ ವಿಧಿಸಿ ಅಕ್ಟೋಬರ್ 28ರಂದು ತೀರ್ಪು ಪ್ರಕಟಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಫರಂಗಿಪೇಟೆಯಲ್ಲಿ 2020ರ ಅಕ್ಟೋಬರ್ 28ರಂದು ಈ ಘಟನೆ ನಡೆದಿತ್ತು. ಸ್ಥಳೀಯ ಸ್ಟುಡಿಯೋ ಮಾಲೀಕ ದಿನೇಶ್ ಅವರು ಸ್ಟುಡಿಯೋದಲ್ಲಿದ್ದ ಸಂದರ್ಭದಲ್ಲಿ, ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಒಳನುಗ್ಗಿದ ನಾಲ್ವರು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಮಹಮ್ಮದ್ ಸೈಫುದ್ದೀನ್, ಮಹಮ್ಮದ್ ಹರ್ಷಾದ್, ಅಬ್ದುಲ್ ರಹಿಮಾನ್ ಅಲಿಯಾಸ್ ಮುನ್ನಿ ಹಾಗೂ ಮಹಮ್ಮದ್ ಸವಾದ್ ಶಿಕ್ಷೆಗೆ ಗುರಿಯಾದವರು.
ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸಾಕ್ಷ್ಯಾಧಾರಗಳು ಮತ್ತು ವಾದಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ನಾಲ್ವರೂ ಅಪರಾಧಿಗಳಿಗೆ ತಲಾ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು ₹88,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ವಾದ ಮಂಡಿಸಿದ್ದರು. ಪೊಲೀಸ್ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯ ಬಳಿಕ ನಾಲ್ವರಿಗೆ ಶಿಕ್ಷೆ ಪ್ರಕಟವಾಗಿದೆ.
28-10-26 10:52 pm
HK News Desk
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
ದೇವೇಗೌಡ್ರ ಕುಟುಂಬವನ್ನು ಮುಗಿಸಲು ಡಿಕೆಶಿಯಿಂದ 600...
26-10-26 11:55 am
Rahul Gandhi, Siddaramaiah: ಸ್ಟಿಂಗ್ ಆಪರೇಶನ್ ;...
26-10-26 11:53 am
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
29-10-26 02:12 pm
HK News Staffer
ಶಾಲೆಗೆ ತೆರಳಿದ್ದ 9ನೇ ಕ್ಲಾಸಿನ ಅಪ್ರಾಪ್ತ ವಿದ್ಯಾರ್...
28-10-26 09:28 pm
TIVA Investment Scam, Mangalore: ಮತ್ತೊಂದು ದೋಖ...
28-10-26 07:18 pm
ವೇದವ್ಯಾಸ ಕಾಮತರೇ ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊ...
28-10-26 04:59 pm
ಉದಯೋನ್ಮುಖ ನಟಿ ವಿನುತಾ ನಾಯಕ್ ಹಠಾತ್ ಕುಸಿದು ಬಿದ್ದ...
28-10-26 11:53 am
29-10-26 01:14 pm
HK News Staffer
Kedila Society, Keshav Gowda, Blackmail: ಮುಸ್...
29-10-26 12:14 pm
ಯುನೈಟೆಡ್ ನೇಶನ್ಸ್ ಹೈಕಮಿಷನರ್ ಹೆಸರಲ್ಲಿ ಫೋನ್ ಕರೆ...
28-10-26 10:42 pm
ಬ್ರಹ್ಮಾವರ ರೌಡಿಶೀಟರ್ ಕೊಲೆ ; ಸೋದರರಿಬ್ಬರ ಬಂಧನ, ಹ...
28-10-26 04:57 pm
ತಮಿಳುನಾಡು ಜೈಲಿನಿಂದ 17 ಕೈದಿಗಳ ಪರಾರಿ; 30 ವರ್ಷಗಳ...
28-10-26 10:28 am