ಬ್ರೇಕಿಂಗ್ ನ್ಯೂಸ್
30-10-26 05:13 pm HK News Staffer ಕ್ರೈಂ
ಬೆಂಗಳೂರು, ಅಕ್ಟೋಬರ್ 30: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಐವರು ಕನ್ನಡಿಗರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಐವರು ಸ್ನೇಹಿತರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್ ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಭೇಟಿ ನೀಡಿದ್ದರು. ಬದರಿನಾಥದಿಂದ ಡೆಹ್ರಾಡೂನ್ನ ಸಹಸ್ತ್ರಧಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ದುರಂತ ಸಂಭವಿಸಿದೆ.
ಮಧ್ಯಾಹ್ನ 1.14ಕ್ಕೆ ಬದರಿನಾಥದಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್ ಕೆಲವೇ ಸಮಯದ ಬಳಿಕ ಸಂಪರ್ಕ ಕಳೆದುಕೊಂಡಿತ್ತು. ಹೆಲಿಕಾಪ್ಟರ್ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಬಳಿಕ ಹೆಲಿಕಾಪ್ಟರ್ ಪತನಗೊಂಡಿರುವುದು ತಿಳಿದುಬಂದಿದೆ.
ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆಹಚ್ಚಿರುವ ಉತ್ತರಾಖಂಡ ಪೊಲೀಸರು, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ಗುಂಪು ದುರಂತದಲ್ಲಿ ಸಾವನ್ನಪ್ಪಿರುವ ಸುದ್ದಿ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆಘಾತ ಮೂಡಿಸಿದೆ.
ದುರಂತದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ನ ಎಲ್ಲಾ ಹೆಲಿಕಾಪ್ಟರ್ಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ಮಾಹಿತಿ ನೀಡಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
31-10-26 02:25 pm
HK News Staffer
ಸೌಜನ್ಯಾ ಮರು ತನಿಖೆ ; ಎಸ್ಐಟಿ ಮುಖ್ಯಸ್ಥರಾಗಿ ಚೇತನ್...
30-10-26 12:51 pm
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
31-10-26 01:16 pm
HK News Staffer
ಕಾರವಾರದ ಮುದಗಾ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ:...
31-10-26 01:05 pm
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆ...
30-10-26 11:01 pm
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm