ಬ್ರೇಕಿಂಗ್ ನ್ಯೂಸ್
03-11-26 10:44 am HK News Staffer ಕ್ರೈಂ
ನವದೆಹಲಿ, ನವೆಂಬರ್ 3: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಈ ಭೇಟಿಯಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ.
ರಾಹುಲ್ ಗಾಂಧಿ ಅವರೊಂದಿಗೆ ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಕೂಡ ಉಪಸ್ಥಿತರಿದ್ದರು.
ಸಭೆಯಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿದ್ದೇನೆ. ಬೇರೆ ಯಾರ ಒತ್ತಡಕ್ಕೂ ಮಣಿದು ರಾಜೀನಾಮೆ ನೀಡಿಲ್ಲ. ಆದರೆ ಅಧಿಕಾರದಿಂದ ಕೆಳಗಿಳಿದ ಬಳಿಕ ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಅವರು ರಾಹುಲ್ ಮುಂದೆ ಅಸಮಾಧಾನ ತೋಡಿಕೊಂಡಿದ್ದಾರೆ.
ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋವನ್ನು ಸೃಷ್ಟಿಸಿದವರು ಯಾರು? ಅದನ್ನು ಹಂಚಿಕೊಂಡವರ ಉದ್ದೇಶವೇನು ಎಂಬುದು ತಮಗೆ ತಿಳಿದಿದೆ ಎಂದು ಸಿದ್ದರಾಮಯ್ಯ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಮತ್ತೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಅಲ್ಲ. ಆದರೂ ತಮ್ಮ ಹೆಸರಿಗೆ ಧಕ್ಕೆ ತರುವ ಪ್ರಯತ್ನ ಮುಂದುವರಿದರೆ ಚುನಾವಣಾ ಪ್ರಚಾರದಲ್ಲಿಯೂ ಭಾಗವಹಿಸುವುದಿಲ್ಲ ಎಂದು ರಾಹುಲ್ ಗಾಂಧಿ ಅವರಿಗೆ ಸ್ಪಷ್ಟಪಡಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಸ್ಟಿಂಗ್ ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿರುವಾಗಲೇ ಸಿದ್ದರಾಮಯ್ಯ, ತಮ್ಮ ಅಸಮಾಧಾನ ವ್ಯಕ್ತಪಡಿಸಿರುವುದು ಮಹತ್ವ ಪಡೆದಿದೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
02-11-26 09:47 pm
HK News Staffer
ಆಳ ಸಮುದ್ರದಲ್ಲಿ ನೀರಿಗೆ ಬಿದ್ದು ಅಪಾಯಕ್ಕೀಡಾದ ಮೀನು...
02-11-26 05:34 pm
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ; ಆರಿಫ್...
01-11-26 10:49 pm
ಮಂಗಳೂರಿನ ಮಂಜುಗಡ್ಡೆ ತಯಾರಿಕಾ ಘಟಕಕ್ಕೆ ಆಹಾರ ಸುರಕ್...
01-11-26 10:13 pm
ದೇಶದಲ್ಲಿ ಆಡಳಿತ ಬದಲಿಸುವುದಕ್ಕೇ ನಮ್ಮ ಹೋರಾಟ ; ರಂಗ...
31-10-26 09:40 pm
03-11-26 10:44 am
HK News Staffer
15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಖತರ್ನಾಕ್...
02-11-26 09:48 pm
ಬೈಕಂಪಾಡಿಯಲ್ಲಿ ಲಾರಿ- ಸ್ಕೂಟರ್ ಡಿಕ್ಕಿ ; ಸವಾರ ತೀವ...
02-11-26 09:44 pm
ಕಾಪುವಿನ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ದಾಳಿ: ಕಟ್ಟಡ...
02-11-26 11:31 am
ಪ್ರೀತಿಸುತ್ತಿದ್ದ ಯುವತಿಯ ಖಾಸಗಿ ಫೋಟೊ ಜಾಲತಾಣದಲ್ಲಿ...
01-11-26 04:08 pm