ಬ್ರೇಕಿಂಗ್ ನ್ಯೂಸ್
06-11-26 10:55 am HK News Staffer ಕ್ರೈಂ
ಬೆಂಗಳೂರು, ನ.6: ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಏಳು ಜೀವಗಳು ಬಲಿಯಾಗಿವೆ. ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಕ್ಯಾಬ್ ಚಾಲಕನೊಬ್ಬ ರುಬ್ಬುಗುಂಡಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಹತ್ಯೆಯ ಬಳಿಕ ಮೃತದೇಹಗಳನ್ನು ಬೇರೆ ಬೇರೆ ಸ್ಥಳಗಳಲ್ಲಿ ಎಸೆದು ಪರಾರಿಯಾಗಲು ಯತ್ನಿಸಿದ್ದ ಆರೋಪಿ ಇಂದುಶೇಖರ್ ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ನಡೆದಿದ್ದ ಈ ಸಾಮೂಹಿಕ ಹತ್ಯೆ ಪ್ರಕರಣ ನಾಪತ್ತೆ ದೂರಿನ ತನಿಖೆಯಿಂದ ಬಯಲಾಗಿದೆ.
ಏಳು ವರ್ಷದ ಬಾಲಕನನ್ನೂ ಬಿಡದ ಆರೋಪಿ!
ಹತ್ಯಾಕಾಂಡದಲ್ಲಿ ಶ್ರೀರಾಮಪುರದ ರೂಪವತಿ, ಆಕೆಯ ಮಗಳು ಸುನೀತಾ, ಪುತ್ರರಾದ ಶಿವಕುಮಾರ್ ಮತ್ತು ಶಂಕರ್, ಸೊಸೆಯಂದಿರಾದ ದಿವ್ಯಾ ಮತ್ತು ನಳಿನಿ ಹಾಗೂ ಏಳು ವರ್ಷದ ಮೊಮ್ಮಗ ಪುನೀತ್ ಮೃತಪಟ್ಟಿದ್ದಾರೆ. ಸುಮಾರು 20 ವರ್ಷಗಳ ಹಿಂದೆ ಸುನೀತಾಳನ್ನು ವಿವಾಹವಾಗಿದ್ದ ಇಂದುಶೇಖರ್, ಪತ್ನಿ ತನ್ನ ತವರು ಮನೆಯವರೊಂದಿಗೆ ನಿಕಟ ಸಂಬಂಧ ಹೊಂದಿರುವುದನ್ನು ಇಷ್ಟಪಡುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಪತ್ನಿಯ ತಾಯಿ ಮತ್ತು ಸಹೋದರರು ಸುನೀತಾಳ ಪರವಾಗಿ ನಿಲ್ಲುತ್ತಿದ್ದುದೂ ಆತನ ಆಕ್ರೋಶಕ್ಕೆ ಕಾರಣವಾಗಿದ್ದು ಇದೇ ಕಾರಣಕ್ಕೆ ಇಡೀ ಕುಟುಂಬವನ್ನೇ ಆತ ಬಲಿ ಪಡೆದಿದ್ದಾನೆ.


ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಪೂರ್ವಯೋಜಿತವಾಗಿ ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಮೊದಲು ತನ್ನ ಮನೆಯಲ್ಲೇ ಪತ್ನಿ ಸುನೀತಾಳನ್ನು ರುಬ್ಬುಗುಂಡಿನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಸುನೀತಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಳೆ ಎಂದು ಆಕೆಯ ಕುಟುಂಬದವರಿಗೆ ಸುಳ್ಳು ಹೇಳಿ ಅನುಮಾನ ಬಾರದಂತೆ ನೋಡಿಕೊಂಡಿದ್ದಾನೆ. ನಂತರ ಮದ್ಯಪಾನದ ನೆಪದಲ್ಲಿ ಭಾಮೈದರಾದ ಶಿವಕುಮಾರ್ ಮತ್ತು ಶಂಕರ್ ಅವರನ್ನು ಮನೆಗೆ ಕರೆಸಿಕೊಂಡು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಆ ಬಳಿಕ ಅವರ ಪತ್ನಿಯರಾದ ನಳಿನಿ ಮತ್ತು ದಿವ್ಯಾ, ಅತ್ತೆ ರೂಪವತಿ ಹಾಗೂ ಏಳು ವರ್ಷದ ಬಾಲಕ ಪುನೀತ್ನನ್ನೂ ಕೊಂದಿದ್ದಾನೆ.
ನಳಿನಿ ನಿಗೂಢವಾಗಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯ ತಾಯಿ ಶ್ರೀರಾಮಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಇಂದುಶೇಖರ್ನನ್ನು ವಿಚಾರಣೆಗೊಳಪಡಿಸಿದಾಗ ಆತ ನೀಡಿದ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಇದರಿಂದ ಅನುಮಾನಗೊಂಡ ಪೊಲೀಸರು ಆತನ ಮನೆ ಪರಿಶೀಲಿಸಿದಾಗ ಹತ್ಯೆಗೆ ಸಂಬಂಧಿಸಿದ ಸುಳಿವುಗಳು ಲಭ್ಯವಾಗಿವೆ. ಬಳಿಕ ತೀವ್ರ ವಿಚಾರಣೆ ನಡೆಸಿದಾಗ ಆರೋಪಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಏಳು ಮಂದಿಯನ್ನು ಹತ್ಯೆ ಮಾಡಿದ ಬಳಿಕ ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಸುತ್ತಮುತ್ತ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಗುರುವಾರ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸತತ ನಾಲ್ಕು ಗಂಟೆಗಳ ಹುಡುಕಾಟದ ಬಳಿಕ ಏಳು ವರ್ಷದ ಬಾಲಕ ಪುನೀತ್ನ ಮೃತದೇಹ ಪತ್ತೆಯಾಗಿದೆ. ಉಳಿದ ಆರು ಮಂದಿಯ ಮೃತದೇಹಗಳಿಗಾಗಿ ಶೋಧ ಮುಂದುವರಿದಿದೆ.
ಹತ್ಯೆಯ ಬಳಿಕ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಆರೋಪಿ, ಕೃತ್ಯಕ್ಕೆ ಬಳಸಿದ್ದ ರುಬ್ಬುಗುಂಡನ್ನೂ ತೊಳೆದು ಇಟ್ಟಿದ್ದ ಎನ್ನಲಾಗಿದೆ. ಮೃತದೇಹಗಳನ್ನು ಸಾಗಿಸಲು ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ನಿಖರ ಕಾರಣ, ಕೃತ್ಯಕ್ಕೆ ಬಳಸಿದ ವಸ್ತುಗಳು, ಮೃತದೇಹಗಳನ್ನು ಸಾಗಿಸಿದ ರೀತಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
03-11-26 09:48 pm
HK News Desk
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
06-11-26 11:03 pm
HK News Desk
ಕಾಂಗ್ರೆಸ್ ಕಾಲದಲ್ಲಿ 11 ಬಾರಿ ಎಸ್ಐಆರ್ ಲೀಗಲ್, ಈಗ...
06-11-26 09:35 pm
ಮಂಗಳೂರು ಮೂಲದ ಯಾಯಿನ್ ಕಿರಣ್ ರೈ ಯುಎಇ ಅಂಡರ್-19 ಕ್...
06-11-26 09:21 pm
ಪಿಲಿಕುಳ ನಿಸರ್ಗಧಾಮದ 356 ಎಕರೆ ಭೂ ಗುತ್ತಿಗೆ ರದ್ದು...
05-11-26 09:42 pm
ಬೆಂಗಳೂರಿನಿಂದ LSD ಡ್ರಗ್ಸ್ ಸಪ್ಲೈ: ಮಂಗಳೂರಿನ ವಿದ...
05-11-26 03:23 pm
06-11-26 08:08 pm
HK News Desk
Naresh Bhat, Wife Murder: ಪತ್ನಿ ವಿಷ ಕುಡಿದು ಆತ...
06-11-26 05:01 pm
ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ ; ಪತ್ನಿ ಮೇಲಿನ ಸಿ...
06-11-26 10:55 am
Mangalore, Veerendra Shetty: ಜಾಗದ ವಿಚಾರದಲ್ಲಿ...
05-11-26 10:45 pm
ಬಾಳೆಕುದ್ರು ಮಠದ ಸಾವಿರಾರು ವರ್ಷ ಹಿನ್ನೆಲೆಯ ವಿಗ್ರಹ...
05-11-26 07:51 pm