'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ್ ಕೊಚ್ಚಿ ಏರ್ಪೋರ್ಟ್ ನಲ್ಲಿ ಪೊಲೀಸರ ವಶಕ್ಕೆ

21-11-26 12:33 pm       HK News Staffer   ಕ್ರೈಂ

'ಬಸವ ಮಂಟಪ' ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಶನಿವಾರ ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ರವಿ ಹಂಜ್ ಅವರು ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆದು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು, ನ.21: 'ಬಸವ ಮಂಟಪ' ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಶನಿವಾರ ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ರವಿ ಹಂಜ್ ಅವರು ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆದು ವಶಕ್ಕೆ ಪಡೆಯಲಾಗಿದೆ.

'ಬಸವ ಮಂಟಪ' ಕೃತಿಯ ವಿವಾದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಲೇಖಕ ರವಿ ಹಂಜ್ ಮತ್ತು ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಅವರ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಕೊಚ್ಚಿನ್ ವಿಮಾನ ನಿಲ್ದಾಣ ಸಿಬ್ಬಂದಿ ನೀಡಿದ ಮಾಹಿತಿಯ ಮೇರೆಗೆ ಬೆಳಗಾವಿ ಪೊಲೀಸರು ಅಲ್ಲಿ ತೆರಳಿ ವಶಕ್ಕೆ ಪಡೆದು ಕರೆತರಲಿದ್ದಾರೆ.

ಸುಮಾರು 600 ಪುಟಗಳ 'ಬಸವ ಮಂಟಪ' ಕೃತಿಯಲ್ಲಿನ ವಿಷಯಗಳು ಮತ್ತು ಸಂದರ್ಶನದಲ್ಲಿ ನೀಡಿರುವ ಹೇಳಿಕೆಗಳ ವಿಚಾರದಲ್ಲಿ ವೀರಶೈವ ಮತ್ತು ಬಸವಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು.