ಕಾಪು ಬೀಚ್ ನಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿದ ದಾವಣಗೆರೆ ಮೂಲದ ಮೂವರು ಬಾಲಕರು ; ಇಬ್ಬರು ನೀರುಪಾಲು, ಒಬ್ಬನ ರಕ್ಷಣೆ

23-11-26 02:24 pm       HK News Staffer   ಕ್ರೈಂ

ಪ್ರವಾಸಕ್ಕೆಂದು ಬಂದಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಬಾಲಕರು ಕಾಪು ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಓರ್ವ ಬಾಲಕನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರ ಪಾಲಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಉಡುಪಿ, ನ.23: ಪ್ರವಾಸಕ್ಕೆಂದು ಬಂದಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಬಾಲಕರು ಕಾಪು ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಓರ್ವ ಬಾಲಕನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರ ಪಾಲಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. 

ಉಡುಪಿಯ ಕಾಪು ಬೀಚ್‌ನಲ್ಲಿ ಘಟನೆ ನಡೆದಿದ್ದು ದಾವಣಗೆರೆ ಮೂಲದ ಮೂವರು ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದಾರೆ. ಮೂವರಲ್ಲಿ ಓರ್ವ ಬಾಲಕನನ್ನು ರಕ್ಷಿಸಲಾಗಿದ್ದು, 20 ವರ್ಷದ ಸಮೀರ್ ಬಾಷಾ ಹಾಗೂ 15 ವರ್ಷದ ಮಲ್ಲಿಕ್ ರಿಯಾನ್ ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

​ದಾವಣಗೆರೆಯಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಮೊಹಮ್ಮದ್ ಇಸಾಕ್, ಸಮೀರ್ ಭಾಷಾ (20) ಹಾಗೂ ಮಲ್ಲಿಕ್ ರಿಯಾನ್ (15) ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ದಿಢೀರ್ ಎದ್ದ ಬೃಹತ್ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರು ಹಾಗೂ ಬೀಚ್ ಲೈಫ್ ಗಾರ್ಡ್ ಸಿಬ್ಬಂದಿ ಸಮುದ್ರಕ್ಕೆ ಧುಮುಕಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು ಮುಳುಗುತ್ತಿದ್ದ ಮೊಹಮ್ಮದ್ ಇಸಾಕ್‌ನನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. 

ಸಮೀರ್ ಬಾಷಾ ಹಾಗೂ ಮಲ್ಲಿಕ್ ರಿಯಾನ್ ಅಲೆಗಳ ರಭಸಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದು, ಕರಾವಳಿ ಕಾವಲು ಪಡೆ, ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ನೆರವಿನೊಂದಿಗೆ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.