ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm