ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.

ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am