ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
10-08-26 01:11 pm
HK News Staffer
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm