ಬ್ರೇಕಿಂಗ್ ನ್ಯೂಸ್
24-02-21 11:08 am Mangalore Correspondent ಕ್ರೈಂ
ಮಂಗಳೂರು, ಫೆ.24 : ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ಪ್ರಕರಣದ ಬೆನ್ನಲ್ಲೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ.
ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಕಳೆದ ಶುಕ್ರವಾರ ಬೆಳ್ಳಂಬೆಳಗ್ಗೆ ಕೇರಳ ರಾಜ್ಯದ ವರ್ಕಳದಿಂದ ರೈಲಿನಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದರು. ನಸುಕಿನ ಜಾವ ಆಗಿದ್ದ ಕಾರಣ ಆಕೆ ರೈಲಿನಲ್ಲಿ ನಿದ್ರಿಸುತ್ತಿದ್ದಳು. ಈ ವೇಳೆ ಸಹ ಪ್ರಯಾಣಿಕನಾಗಿದ್ದ ಆರೋಪಿ ಆಕೆಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.
ತಕ್ಷಣ ಆತನ ವಿಡಿಯೋ ಮಾಡಿದ ಯುವತಿ ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಬಳಿಕ ಇದು ವೈರಲ್ ಆಗಿದ್ದು, ಅನೇಕರು ಯುವತಿಯ ಬೆಂಬಲಕ್ಕೆ ಬಂದಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸ್ ದೂರು ಕೂಡ ನೀಡಲಾಗಿತ್ತು. ದೂರು ನೀಡಿ ನಾಲ್ಕು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿ ನಾಯಕ ಸುಹಾನ್ ಆಳ್ವ ಮಾತನಾಡಿ, ಯುವತಿಗೆ ಆಗಿರುವ ಅನ್ಯಾಯದ ಬಗ್ಗೆ ನಾವು ದನಿ ಎತ್ತಿದ್ದು, ಈ ಬಗ್ಗೆ ತಕ್ಷಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಇದೀಗ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.
The railway police of Mangalore arrested a man for allegedly sexually harassing a woman passenger in a train from Kerala bound for Mangalore
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm