ಬ್ರೇಕಿಂಗ್ ನ್ಯೂಸ್
24-08-20 05:51 pm Mangalore Reporter ಕ್ರೈಂ
ಬೆಳ್ತಂಗಡಿ, ಆಗಸ್ಟ್ 24: ಸೋಮವಾರ ಮುಂಜಾನೆ, ವಾಕಿಂಗ್ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ ನಿವಾಸಿ ವಾಸು ಸಪಲ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆರೋಪಿ ಪುತ್ರ ದಯಾನಂದ ನಡೆಸಿದ ಮಾರಾಕಾಸ್ತ್ರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ ವಾಸು ಸಪಲ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ವಾಸು, ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮಗ ದಯಾನಂದ ಕೂಡ ಚಾಲಕನಾಗಿದ್ದು ಕುಡಿದು ಬಂದು ತಂದೆ ಜೊತೆ ಗಲಾಟೆ ಮಾಡುತ್ತಿದ್ದ. ತಂದೆ - ಮಗನ ಜಗಳ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದೂ ಆಗಿತ್ತು. ವಾಸು ಸಪಲ್ಯ ಮೇಲೆ ಮಾರಣಾಂತಿಕ ದಾಳಿ ನಡೆದ ಬಳಿಕ ಮಗ ಸೋಮವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ಸ್ಥಳೀಯರಲ್ಲಿ ಮಗನ ಮೇಲೆ ಅನುಮಾನ ವ್ಯಕ್ತವಾಗಿದೆ.
ಮೃತರು ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm