ಬ್ರೇಕಿಂಗ್ ನ್ಯೂಸ್
31-07-20 06:45 pm Headline Karnataka News Network ಕ್ರೈಂ
ಮುಂಬೈ: ಕೌಟುಂಬಿಕ ಕಲಹದಿಂದ ಸ್ನೇಹಿತನ ಸಹಾಯದಿಂದ ಪತ್ನಿಯನ್ನೇ ಕೊಂದು ಡ್ರಮ್ನಲ್ಲಿ ತುಂಬಿ ಮೃತದೇಹವನ್ನು ಎಸೆದಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಅಂಬುಜ್ ತಿವಾರಿ ಎಂದು ಗುರುತಿಸಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಲಂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಏನಿದು ಪ್ರಕರಣ?
ಜುಲೈ 23 ರಂದು ಆರೋಪಿ ತಿವಾರಿಯ ತಂದೆ ಮಹೇಂದ್ರ ಪೊಲೀಸ್ ಠಾಣೆಗೆ ಬಂದು ತಮ್ಮ ಮಗ ಮತ್ತು ಸೊಸೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ನನ್ನ ಮಗ ಸಿಮೆಂಟ್ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಸೊಸೆ ಗೃಹಿಣಿಯಾಗಿದ್ದು, ಜುಲೈ 22 ರಂದು ಇಬ್ಬರೂ ನಾಪತ್ತೆಯಾಗಿದ್ದರು ಎಂದು ಮಹೇಂದ್ರ ಪೊಲೀಸರಿಗೆ ತಿಳಿಸಿದ್ದರು.
ದೂರು ದಾಖಲಿಸಿಕೊಂಡ ನಂತರ ಪೊಲೀಸರು ದಂಪತಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಮಂಗಳವಾರ ಘನ್ಸೋಲಿಯಲ್ಲಿ ತಿವಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಪತ್ನಿಯ ಬಗ್ಗೆ ಪ್ರಶ್ನಿ ಮಾಡಿದ್ದಾರೆ. ಆಗ ಆರೋಪಿ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿ ಅಂಬುಜ್ನನ್ನ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.
ಆಗ ಆರೋಪಿ ಪತ್ನಿಯನ್ನು ತಾನೇ ಕೊಲೆ ಮಾಡಿ ಶವವನ್ನು ಲೋನವಾಲಾದಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಅಂಬುಜ್ನನ್ನು ಮೃತದೇಹವನ್ನು ಎಸೆದಿರುವ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಡ್ರಮ್ನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ.
ಆರೋಪಿ ತನ್ನ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಪಟ್ಟಿದ್ದನು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜುಲೈ 23 ರಂದು ಅಂಬುಜ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪತ್ನಿ ನೀಲಂಗೆ ತನ್ನ ಸ್ನೇಹಿತ ಶ್ರೀಕಾಂತ್ ಚೌಬೆ ಮನೆಗೆ ಹೋಗಬೇಕೆಂದು ಹೇಳಿದ್ದನು. ಆದರೆ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ತಿವಾರಿ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತ ಚೌಬೆ ಮನೆಗೆ ಕರೆದು ಪತ್ನಿಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾನೆ. ನಂತರ ನೀಲಂ ಮೃತದೇಹವನ್ನು ಎಸೆಯಲು ಆರೋಪಿ ತಿವಾರಿಗೆ ಸ್ನೇಹಿತ ಸಹಾಯ ಮಾಡಿದ್ದಾನೆ. ನಂತರ ಇಬ್ಬರು ಸೇರಿಕೊಂಡು ಮೃತದೇಹವನ್ನು ಡ್ರಮ್ನಲ್ಲಿ ತುಂಬಿ ಇಟ್ಟು ಲೋನಾವಾಲಾ ಬಳಿಯ ಪೊದೆಗಳಲ್ಲಿ ಎಸೆದಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm