ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.
ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm