ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.
ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.
ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm