ಬ್ರೇಕಿಂಗ್ ನ್ಯೂಸ್
06-06-21 12:32 pm Udupi Correspondent ಕ್ರೈಂ
ಕುಂದಾಪುರ, ಜೂ.6: ಕೊಳವೆ ಬಾವಿಗೆ ಅನುಮತಿ ನೀಡದ ದ್ವೇಷದಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಪಂ ಅಧ್ಯಕ್ಷನೇ ಕಾರು ಡಿಕ್ಕಿಯಾಗಿಸಿ ಕೊಲೆಗೈದ ಘಟನೆ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ.
ಹೊಸಬಾಳು ನಿವಾಸಿ ಉದಯ ಗಾಣಿಗ (40) ಕೊಲೆಯಾದ ವ್ಯಕ್ತಿ. ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೋರ್ವೆಲ್ ಪರಾವನಿಗೆ ನೀಡುವ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದೇ ದ್ವೇಷದಲ್ಲಿ ಪ್ರಾಣೇಶ್ ಯಡಿಯಾಳ ತನ್ನ ಕಾರು ಚಲಾಯಿಸುತ್ತಿದ್ದ ವೇಳೆ ಅಡ್ಡಸಿಕ್ಕಿದ ಉದಯ ಗಾಣಿಗ ಅವರ ಬೈಕಿಗೆ ಡಿಕ್ಕಿಯಾಗಿಸಿ ಕೊಲೆಗೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಉದಯ ಗಾಣಿಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಈ ವೇಳೆ ಆರೋಪಿ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದ. ಬಳಿಕ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಇತರ ಅಧಿಕಾರಿಗಳು ತೆರಳಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉದಯ ಗಾಣಿಗ ಜಡ್ಕಲ್ನಲ್ಲಿ ಕೃಷಿ ಕೇಂದ್ರವನ್ನು ಹೊಂದಿದ್ದು ಬೋರ್ ವೆಲ್ ಅನುಮತಿ ನೀಡುವ ಜವಾಬ್ದಾರಿ ಹೊಂದಿದ್ದರು.
ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 40-year-old social activist was found dead in a suspicious manner after a car ran over him at Yadamoge under the Shankaranarayana Police station limits on Saturday, June 5 night.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 07:22 pm
HK News Staffer
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm