ಬ್ರೇಕಿಂಗ್ ನ್ಯೂಸ್
13-06-21 04:34 pm Mangaluru Correspondent ಕ್ರೈಂ
ಉಳ್ಳಾಲ, ಜೂ.13: ಬೆಂಗಳೂರಿನ ಕಮ್ಮನಹಳ್ಳಿಯಿಂದ 4 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ MDMA ಮಾದಕ ವಸ್ತುವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಕಾರನ್ನು ನಾಟೆಕಲ್ ಎಂಬಲ್ಲಿ ಕೊಣಾಜೆ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದ ತಂಡ ಇಂದು ಬೆಳಗ್ಗೆ ಜಪ್ತಿ ಮಾಡಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಸಮೀಪದ ವಿಜಯ ನಗರ ಎಂಬಲ್ಲಿ ನಿಷೇಧಿತ ಮಾದಕ ವಸ್ತು MDMA ಸಾಗಿಸುತ್ತಿದ್ದ ಸ್ವಿಫ್ಟ್ ಕಾರನ್ನು ಕೊಣಾಜೆ ಠಾಣೆ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದಾರ್ ನೇತೃತ್ವದ ತಂಡ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು.


ಶಫೀಕ್ ಮತ್ತು ಅಲ್ತಾಫ್ ಬೆಂಗಳೂರಿನ ಕಮ್ಮನ ಹಳ್ಳಿಯಿಂದ 3,90,000 ರೂಪಾಯಿ ಮೌಲ್ಯದ ನಿಷೇಧಿತ ಮಾದಕ ಪದಾರ್ಥ MDMA ಯನ್ನು ಸ್ವಿಪ್ಟ್ ಕಾರಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ತರುತ್ತಿದ್ದರು. ಹೆದ್ದಾರಿಯಿಂದ ಮೆಲ್ಕಾರ್, ಮುಡಿಪು, ನಾಟೆಕಲ್ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಠಾಣಾ ಸಬ್ಬಿನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದರ್ ಅವರು ನಾಟೆಕಲ್ ನ ವಿಜಯನಗರ ಎಂಬಲ್ಲಿ ಸ್ವಿಫ್ಟ್ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳನ್ನ ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುಗಳನ್ನ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಹೇಳಿದ್ದು, ಬಂಧಿತ ಆರೋಪಿಗಳಿಂದ 4 ಮೊಬೈಲ್ ಫೋನ್, ಒಂದು ಸ್ವಿಪ್ಟ್ ಕಾರು ಸೇರಿ ಒಟ್ಟು 9,01,000 ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿರಾಂ ಶಂಕರ್ ನಿರ್ದೇಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಕೊಣಾಜೆ ಠಾಣೆ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Konaje police on Sunday June 13 intercepted a car at Natekal, Manjanady and arrested two persons who were transporting banned MDMA drugs. The car with with registration number KL 14 R 3536 was heading from Uppinangady to Kerala through Malkar, Mudipu and Natekal route.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am