ಬ್ರೇಕಿಂಗ್ ನ್ಯೂಸ್
30-06-21 05:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 30: ಗಾಂಜಾ ಬೆಳೆಯಲ್ಲೇ ಅತ್ಯಂತ ಹೆಚ್ಚು ಬೆಲೆಬಾಳುವ ಹೈಡ್ರೋವೀಡ್ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಂಗಳೂರಿನ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಗರದ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿನಿ ಮಿನು ರಶ್ಮಿ ಮತ್ತು ಕಾಸರಗೋಡಿನ ಮಂಗಲ್ಪಾಡಿ ನಿವಾಸಿ ಅಜ್ಮಲ್ ಎಂಬವರನ್ನು ಬಂಧಿಸಿದ್ದಾರೆ. ಇವರ ಬಳಿಯಿದ್ದ ಸುಮಾರು 30 ಲಕ್ಷದಿಂದ ಒಂದು ಕೋಟಿ ಬೆಲೆಬಾಳುವ ಒಂದು ಕೆಜಿ 250 ಗ್ರಾಮ್ ಹೈಡ್ರೋವೀಡ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಮಿನು ರಶ್ಮಿ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯ್ಲ್ ನಿವಾಸಿಯಾಗಿದ್ದು ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ. ಆದರೆ, ಇದೇ ವೇಳೆ ಮಂಗಲ್ಪಾಡಿ ನಿವಾಸಿ ಅಜ್ಮಲ್ ಜೊತೆ ಒಡನಾಟ ಹೊಂದಿದ್ದಳು. ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ರೈಲಿನಲ್ಲಿ ಮಂಗಳೂರಿಗೆ ಬಂದು ಅಜ್ಮಲ್ ಜೊತೆಗೆ ಕಾರಿನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದಳು. ಕಾರಿನಲ್ಲಿ ಹೈಡ್ರೋವೀಡ್ ಗಾಂಜಾ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು.
ಪ್ರಕರಣದಲ್ಲಿ ಕಾಸರಗೋಡು ಮೂಲದ ವೈದ್ಯ ಡಾ.ನದೀರ್ ಪ್ರಮುಖ ಆರೋಪಿಯಾಗಿದ್ದು ಆತನ ಸ್ನೇಹಿತರಿಗೆ ನೀಡುವಂತೆ ಮಿನು ರಶ್ಮಿಗೆ ಸೂಚನೆ ನೀಡಲಾಗಿತ್ತು. ಅದರಂತೆ, ಗಾಂಜಾ ಸಾಗಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಡಾ. ನದೀರ್ ಸದ್ಯಕ್ಕೆ ದುಬೈನಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈಡ್ರೋವೀಡ್ ಗಾಂಜಾ ಸಾಧಾರಣ ಗಾಂಜಾಕ್ಕಿಂತ ಹತ್ತು ಪಟ್ಟು ಹೆಚ್ಚು ಅಮಲು ಬರಿಸುವ ಪದಾರ್ಥವಾಗಿದ್ದು ಇವನ್ನು ಅತಿ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತದೆ. ಯುರೋಪ್ ರಾಷ್ಟ್ರಗಳಲ್ಲಿ ಇದನ್ನು ನಿಯಮಿತ ಉಷ್ಣತೆಯಲ್ಲಿ ಬೆಳೆಯಲಾಗುತ್ತಿದ್ದು ಅಕ್ರಮವಾಗಿ ಭಾರತಕ್ಕೆ ತಂದು ಮಾರಾಟ ಮಾಡಲಾಗುತ್ತದೆ.
ಗಾಂಜಾ ಪತ್ತೆ ಬಗ್ಗೆ ಮಂಗಳೂರಿನ ಇಕಾನಮಿಕ್ ಅಂಡ್ ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
The Mangalore CCB Police have arrested two among one Doctor who was peddling Hydroweed Drugs worth 30 lakhs to 1 core via the internet.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 01:38 pm
HK News Desk
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm