ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm