ಬ್ರೇಕಿಂಗ್ ನ್ಯೂಸ್
04-08-21 12:15 pm Headline Karnataka News Network ಕ್ರೈಂ
Photo credits : timesofindia
ಕಡಪಾ, ಆಗಸ್ಟ್ 4 : ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ 23 ವರ್ಷದ ಯುವಕನೊಬ್ಬ ಸುಮಾರು 300 ಕ್ಕೂ ಹೆಚ್ಚು ಮಹಿಳೆಯರನ್ನು ಲೈಂಗಿಕವಾಗಿ ಪ್ರಚೋದಿಸಿ, ಬ್ಲ್ಯಾಕ್ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ನಲ್ಲಿ ಸಂಪರ್ಕ ಬೆಳೆಸಿಕೊಂಡು, ಮಹಿಳೆಯ ನಗ್ನ ಫೋಟೋ ವಿಡಿಯೋಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ. ಈತನಿಂದ ಮೋಸಕ್ಕೊಳಗಾದ ಸಂತ್ರಸ್ತರಲ್ಲಿ 200 ಮಂದಿ ಯುವತಿಯರು ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದ ಸುಮಾರು 100ಕ್ಕೂ ಹೆಚ್ಚು ವಿವಾಹಿತ ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೊದಲಿಗೆ ಪರಿಚಯ ಮಾಡಿಕೊಂಡು ಲೈಂಗಿಕ ಸಂಪರ್ಕಕ್ಕೆ ಪ್ರಚೋದಿಸಿ, ಬಳಿಕ ನಗ್ನ ಅಥವಾ ಅರೆ ನಗ್ನ ಫೋಟೋ, ವಿಡಿಯೋಗಳನ್ನು ತೆಗೆದು, ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿ ಹಣ ಮತ್ತು ಆಭರಣಗಳನ್ನು ವಸೂಲಿ ಮಾಡಿಕೊಳ್ಳುತ್ತಿದ್ದ.
ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಪ್ರಸನ್ನ ಕುಮಾರ್ ಎಂದು ಗುರುತಿಸಲಾಗಿದೆ. ಆತನಿಂದ 1.26 ಲಕ್ಷ ರೂ. ಹಣ ಮತ್ತು 30 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮರ್ಯಾದೆಗೆ ಅಂಜಿ ಯಾವುದೇ ಸಂತ್ರಸ್ತೆಯರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ, ತೆಲಂಗಾಣ ಸೆಕ್ರೆಟರಿಯೇಟ್ನಲ್ಲಿ ಕೆಲಸ ಕೊಡಿಸುವುದಾಗಿ ಶ್ರೀನಿವಾಸ್ ಎಂಬವರಿಗೆ ಭರವಸೆ ನೀಡಿ ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಸನ್ನ ಕುಮಾರನ ದುಷ್ಕೃತ್ಯಗಳು ಬೆಳಕಿಗೆ ಬಂದಿವೆ.
ವಿಚಾರಣೆ ವೇಳೆ ಪ್ರಸನ್ನ ಕುಮಾರ್ ಮೊಬೈಲ್ ಫೋನಿನಲ್ಲಿ ಸಂತ್ರಸ್ತ ಯುವತಿಯರ ಫೋಟೋ ಮತ್ತು ವಿಡಿಯೋಗಳು ಇರುವುದು ಪತ್ತೆಯಾಗಿತ್ತು.
ಆರೋಪಿ ಕಡಪಾ ಜಿಲ್ಲೆಯ ಪ್ರದ್ದಟೂರು ಪಟ್ಟಣದ ನಿವಾಸಿಯಾಗಿದ್ದು ಈ ಹಿಂದೆ ಸರಗಳ್ಳತನ ಮತ್ತು ಇನ್ನಿತರ ಕಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿದ್ದ. 2017ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ, ಮಹಿಳೆಯರನ್ನು ಟಾರ್ಗೆಟ್ ಮಾಡಿ ನೀಚ ಕೆಲಸಕ್ಕೆ ಇಳಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 23-year-old B Tech dropout who lured and trapped nearly 300 women from Andhra Pradesh and Telangana into sexual relationship and later blackmailed them and extorted money from them was arrested by the Kadapa police on Sunday.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm