ಬ್ರೇಕಿಂಗ್ ನ್ಯೂಸ್
05-09-20 02:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 05: ಕಿರಿಕ್ ಪಾರ್ಟಿ, ಬಿಗ್ ಬಾಸ್ ಖ್ಯಾತಿಯ ನಟಿ ಸಂಯುಕ್ತ ಹೆಗಡೆ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಬೆಳಕಿಗೆ ಬಂದಿದೆ. ಎಐಸಿಸಿ ಸದಸ್ಯೆ, ರಾಜ್ಯ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ತನ್ನ ಹಲ್ಲೆ ನಡೆಸಿದ್ದಾರೆ ಎಂದು ಸಂಯುಕ್ತಾ ಆರೋಪಿಸಿದ್ದಾಳೆ. ನಗರದ ಪಾರ್ಕ್ ಒಂದರಲ್ಲಿ ಸಂಯುಕ್ತಾ ಹೆಗೆಡೆ ಹಾಗೂ ಅವರ ಸ್ನೇಹಿತರು ಅಶ್ಲೀಲವಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಕವಿತಾ ರೆಡ್ಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸಂಯುಕ್ತಾ ಹೆಗ್ಡೆ ತನ್ನ ಸ್ನೇಹಿತರೊಂದಿಗೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ಬಳಿಯ ಉದ್ಯಾನವನದಲ್ಲಿ ಹುಲಾ ಹೂಪ್ ಪ್ರ್ಯಾಕ್ಟೀಸ್ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಪೋರ್ಟ್ಸ್ ಬಟ್ಟೆ ಧರಿಸಿದ್ದರು. ಈ ವೇಳೆ ಕವಿತಾ ರೆಡ್ಡಿ ಮತ್ತು ಆಕೆಯ ಸ್ನೇಹಿತರು ಸೇರಿ ಸಂಯುಕ್ತಾ ಅಸಭ್ಯವಾಗಿ ಬಟ್ಟೆ ತೊಟ್ಟು ಅಶ್ಲೀಲವಾಗಿ ವರ್ತಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ. ಇದೇ ವೇಳೆ, ಕವಿತಾ ರೆಡ್ಡಿ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಿದ್ದ ಸಂಯುಕ್ತಾ ಹೆಗಡೆಯ ಸ್ನೇಹಿತೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇವೆಲ್ಲದರ ವಿಡಿಯೋವನ್ನು ನಟಿ ಸಂಯುಕ್ತಾ ಹೆಗಡೆ ಕೂಡ ವಿಡಿಯೋ ಮಾಡಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಲ್ಲದೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು, ನಮ್ಮ ಸಮಾಜದಲ್ಲಿ ಇಂತಹ ನೈತಿಕ ಪೊಲೀಸ್ಗಿರಿಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ. ಸಂಯುಕ್ತಾ ಹೆಗಡೆ ಅವರೊಂದಿಗೆ ಏನು ನಡೆದಿದೆ ಅದು ದುರದೃಷ್ಟಕರ. ನಟಿ ಮತ್ತು ಆಕೆಯ ಸ್ನೇಹಿತರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಕವಿತಾ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
The future of our country reflects on what we do today. We were abused and ridiculed by Kavitha Reddy at Agara Lake@BlrCityPolice @CPBlr
— Samyuktha Hegde (@SamyukthaHegde) September 4, 2020
There are witnesses and more video evidence
I request you to look into this#thisisWRONG
Our side of the storyhttps://t.co/xZik1HDYSs pic.twitter.com/MZ8F6CKqjw
Join our WhatsApp group for latest news updates
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm