ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm