ಬ್ರೇಕಿಂಗ್ ನ್ಯೂಸ್
06-09-20 01:54 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನ ಸಿಸಿಬಿ ಕಚೇರಿಯ ಮುಂದೆ ಇಂದು ಬೆಳ್ಳಂಬೆಳಗ್ಗೆ ಹೈಡ್ರಾಮಾ ಸೃಷ್ಟಿಯಾಗಿದ್ದು,ಬೈಕ್ ನಲ್ಲಿ ಬಂದ ಯುವಕನೊಬ್ಬ ಡ್ರಗ್ಸ್ ದಂಧೆಯಲ್ಲಿ ನಾನೂ ಭಾಗಿಯಾಗಿದ್ದೇನೆ, ನಟಿ ರಾಗಿಣಿ ಮತ್ತು ನಾನು ಕ್ಲೋಸ್ ಇದ್ದೇವೆ. ಅವರ ಜೊತೆ ಫೋಟೋ ದಲ್ಲಿ ಇರುವುದು ನಾನೇ. ನಿಮಗೆ ಬೇಕಾದ 13ನೇ ಆರೋಪಿ ನಾನೇ…ಅರೆಸ್ಟ್ ಮಾಡಿ…ಎಂದು ಹೇಳಿ ಕೆಲ ಕಾಲ ಗೊಂದಲ ಸೃಷ್ಟಿಸಿದ್ದಾನೆ.
ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ. ಸದ್ಯ ಇವರು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದು, ಈ ನಡುವೆಯೇ ಯುವಕ ಕಚೇರಿ ಎದುರು ಬಂದು ಹೈಡ್ರಾಮಾ ಮಾಡಿದ್ದಾನೆ. ಇಲ್ಲಿಯವರೆಗೆ ಒಟ್ಟು 12 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, 13ನೆಯವ ನಾನೇ ಎಂದಿರುವ ಯುವಕ, ನನ್ನನ್ನು ಅರೆಸ್ಟ್ ಮಾಡಿ ಎಂದು ಗೋಗರೆದಿದ್ದಾನೆ! ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಯುವಕನ ಹೆಸರು ಅನಿರುದ್ಧ್ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನ ಜಯನಗರ ಆರ್ಟಿಒ ಕಚೇರಿಯ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಈತ ರಾಗಿಣಿ ಆಪ್ತ ರವಿಶಂಕರ್ನ ಸ್ನೇಹಿತ ಎಂದು ತಿಳಿದುಬಂದಿದೆ. ಇದೇ ಆರ್ಟಿಒ ಕಚೇರಿಯಲ್ಲಿ ರವಿಶಂಕರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದನು. ಸಿಸಿಬಿ ಪೊಲೀಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಅನಿರುದ್ಧ್ ಡ್ರಗ್ಸ್ ಸೇವನೆ ಮಾಡಿದ್ದ ಎಂದಿದ್ದಾರೆ ಪೊಲೀಸರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm