ಬ್ರೇಕಿಂಗ್ ನ್ಯೂಸ್
28-08-21 10:01 pm Headline Karnataka News Network ಕ್ರೈಂ
ಭೋಪಾಲ್, ಆಗಸ್ಟ್ 28; ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದ ಸಿವಿಲ್ ಇಂಜಿನಿಯರನೊಬ್ಬ ಇಬ್ಬರು ಮಕ್ಕಳ ಕುತ್ತಿಗೆ ಕೊಯ್ದು ಪತ್ನಿಯೊಂದಿಗೆ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ನಡೆದಿದೆ.
ಭೋಪಾಲ್ ನಗರದ ಮಿಸ್ ರೋಡ್ ಠಾಣೆ ವ್ಯಾಪ್ತಿಯ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಘಟನೆ ನಡೆದಿದ್ದು, 16 ವರ್ಷದ ಮಗ ಸಾವು ಕಂಡಿದ್ದರೆ, 14 ವರ್ಷದ ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಆಕೆಯ ತಾಯಿ ಕೂಡ ಆಸ್ಪತ್ರೆಯಲ್ಲಿದ್ದು, ಅಪಾಯದಿಂದ ಪಾರಾಗಿದ್ದಾಳೆ.
55 ವರ್ಷದ ವ್ಯಕ್ತಿ ಮತ್ತು ಆತನ ಪತ್ನಿ ಇಬ್ಬರೂ ಸೇರಿ ತಮ್ಮ ಬದುಕು ಕೊನೆಗಾಣಿಸಲು ನಿರ್ಧರಿಸಿದ್ದರು. ಆದಕ್ಕಾಗಿ ಎರಡು, ಮೂರು ದಿನಗಳಿಂದ ಪ್ಲಾನ್ ಹಾಕಿದ್ದರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ವ್ಯಕ್ತಿ ಕಳೆದ ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ. ಇದರಿಂದ ಇಡೀ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮನೆಯ ತಿಂಗಳ ಕಂತು ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಶಿಕ್ಷಣದ ಖರ್ಚನ್ನೂ ಭರಿಸಲು ಸಾಧ್ಯವಾಗುತ್ತಿಲ್ಲ. ತಾವು ಸತ್ತರೆ ಮಕ್ಕಳಿಗೂ ಕಷ್ಟವಾಗುತ್ತದೆ. ಅವರ ಭವಿಷ್ಯವೂ ಕರಾಳವಾಗುತ್ತದೆ. ಹೀಗಾಗಿ ಅವನ್ನೂ ಕೊಲ್ಲಲು ನಿರ್ಧರಿಸಿದ್ದೆ ಎಂದು ಪತ್ರದಲ್ಲಿ ಬರೆದಿದ್ದಾನೆ. ಪುತ್ರ ಮತ್ತು ಪುತ್ರಿಯ ಕುತ್ತಿಗೆಯನ್ನು ಟೈಲ್ ಕಟ್ಟರ್ ಬಳಸಿ ಕೊಯ್ದಿದ್ದ ವ್ಯಕ್ತಿ ಆನಂತರ ಪತ್ನಿಯೊಂದಿಗೆ ಸೇರಿ ವಿಷವನ್ನು ಸೇವಿಸಿದ್ದರು. ತಾಯಿ, ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದರೆ, ತಂದೆ, ಮಗ ಸಾವು ಕಂಡಿದ್ದಾರೆ.
A civil engineer, who was jobless for the last few months, allegedly committed suicide by consuming poison after slitting the throats of his teenage son and daughter with a tile cutter at their flat in a multistoried building in Madhya Pradesh's Bhopal, police said. While his 16-year-old son died of his injuries, 14-year-old daughter's condition is said to be critical, they said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm