ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm