ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm