ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm