ಬ್ರೇಕಿಂಗ್ ನ್ಯೂಸ್
13-09-21 11:12 am Headline Karnataka News Network ಕ್ರೈಂ
Photo credits : Representational
ಯಾದಗಿರಿ, ಸೆ.13: ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ನಾಲ್ಕೈದು ಜನರು ಸೇರಿಕೊಂಡು ಮಹಿಳೆಯೊಬ್ಬರನ್ನ ಬೆತ್ತಲೆಯಾಗಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಮನ ಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.
ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ದೃಶ್ಯವನ್ನು ದುರುಳರು ಮೊಬೈಲ್ನಲ್ಲಿ ಸೆರೆಹಿಡಿದು ವಿಕೃತಿ ಮೆರೆದಿದ್ದಾರೆ. ಯಾದಗಿರಿಯ ಚಟ್ನಳ್ಳಿ ಹಾಗೂ ಹಳಿಸಗರ ಗ್ರಾಮ - ಈ ಎರಡು ಗ್ರಾಮಗಳ ಸುತ್ತ ಮುತ್ತ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
'ನಿಮ್ಮ ಕಾಲಿಗೆ ಬೀಳ್ತೀನಿ, ನನ್ನ ಬಿಟ್ಟು ಬಿಡಿ' ಎಂದು ಮಹಿಳೆ ಗೋಳಾಡಿದರೂ ಕಲ್ಲು ಹೃದಯದ ದುರುಳರು ಆಕೆಯ ಅಂಗಾಂಗಳನ್ನು ಮುಟ್ಟಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಳೆದ ಒಂದೂವರೆ ವರ್ಷದ ಹಿಂದಿನ ಘಟನೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಹೇಳಿದ್ದಾರೆ. ಅಷ್ಟೇ ಅಲ್ಲ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ ಎಂದರು.
ಮಹಿಳೆಯ ಬಗ್ಗೆ ಇನ್ನೂವರೆಗೂ ಗೊತ್ತಾಗಿಲ್ಲ, ನಮ್ಮ ಸಂಪರ್ಕಕ್ಕೂ ಅವರು ಬಂದಿಲ್ಲ. ಇನ್ನು ಘಟನೆ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
Women Abused as Naked by Villagers in Yadagiri District Shahapur.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm