ಬ್ರೇಕಿಂಗ್ ನ್ಯೂಸ್
13-09-21 11:21 am Headline Karnataka News Network ಕ್ರೈಂ
ಬೆಂಗಳೂರು, ಸೆ.13: ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ನನ್ನು ನಗರದ ಕೆಎಸ್ಎಫ್ಎ ಫುಟ್ಬಾಲ್ ಮೈದಾನದಲ್ಲಿ ಅಟ್ಟಾಡಿಸಿ ಕೊಂದಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
27 ವರ್ಷದ ಅರವಿಂದ್ ಕೊಲೆಯಾದ ರೌಡಿ ಶೀಟರ್. ಸಂಜೆ 4 ಗಂಟೆಯ ಸುಮಾರಿಗೆ ಫುಟ್ಬಾಲ್ ಮೈದಾನದೊಳಗೆ 4 ರಿಂದ 5 ಜನರ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿ ರೆಫರಿ ಕೋಣೆಯಲ್ಲಿ ಮರ್ಡರ್ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಪ ಪೊಲೀಸ್ ಆಯುಕ್ತ (ಕೇಂದ್ರ) ಅನುಚೇತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ ಅರವಿಂದ್ ಕೆಎಸ್ಎಫ್ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಪಂದ್ಯಾವಳಿಯಲ್ಲಿ ಆಡಲು ಬಂದಿದ್ದರು. ಸಂಜೆ 4 ಗಂಟೆ ಸುಮಾರಿಗೆ 4 ರಿಂದ 5 ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದು ಅರವಿಂದ್ನನ್ನು ಸುತ್ತು ವರೆದಿದ್ದಾರೆ. ನಂತರ ಆತ ಸ್ಥಳದಿಂದ ಪರಾರಿಯಾಗಿ ಕೆಎಸ್ಎಫ್ಎ ಫುಟ್ಬಾಲ್ ಕ್ರೀಡಾಂಗಣವನ್ನು ಪ್ರವೇಶಿಸಿ ರೆಫರಿಯ ಕೊಠಡಿಯೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಆದರೂ ಬಿಡದ ಆರೋಪಿಗಳು, ಬಾಗಿಲು ಮುರಿದು ಮಾರಕ ಆಯುಧಗಳನ್ನು ಬಳಸಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಗ್ಯಾಂಗ್ಗಳ ಮಧ್ಯೆ ಇದ್ದ ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಅರವಿಂದ್ ರೌಡಿ ಶೀಟರ್ ಆಗಿದ್ದಾನೆ ಹಾಗೂ ಕೆಲ ದಿನಗಳ ಹಿಂದೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ಎಂದು ಕೇಂದ್ರ ವಿಭಾಗದ ಡಿಸಿಪಿ ಮಾಹಿತಿ ನೀಡಿದರು.
ಅರವಿಂದ್ನನ್ನು ಮೈದಾನದಲ್ಲಿ ಅಟ್ಟಿಸಿಕೊಂಡು ಹೋಗುವುದನ್ನು ನೋಡಿ ಆಟಗಾರರು ಮತ್ತು ಪ್ರೇಕ್ಷಕರು ಆಘಾತಕ್ಕೆ ಒಳಗಿದ್ದಾರೆ. ಈ ಸಮಯದಲ್ಲಿರಾಜ್ಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿಯೇ ವಿಭಾಗೀಯ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಪಂದ್ಯದ ಆರಂಭಕ್ಕೂ ಕೆಲವೇ ನಿಮಿಷದ ಮೊದಲು ಕೊಲೆ ನಡೆದಿದೆ ಎಂದು ಅನುಚೇತ್ ತಿಳಿಸಿದರು.
A 27-year-old rowdy-sheeter, who also managed a football team, was hacked to death at a stadium in Bengaluru Sunday evening. Identifying the deceased as Aravind, sources in the police department said the incident took place around 4 pm when the assailants charged into the football ground and chased the youth before killing him in the referee room.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm