ಬ್ರೇಕಿಂಗ್ ನ್ಯೂಸ್
15-09-21 05:33 pm Headline Karnataka News Network ಕ್ರೈಂ
ಕೋಲಾರ, ಸೆ.15 : ಆರು ಕೋಟಿ ಮೌಲ್ಯದ ಎಂಐ ಕಂಪನಿಯ ಮೊಬೈಲ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಓರ್ವ ಆರೋಪಿಯನ್ನ ಕೋಲಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯ ಸಮುದ್ರ ಬಳಿ ಆಗಸ್ಟ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಮೊಬೈಲ್ ತುಂಬಿದ್ದ ಕಂಟೇನರ್ ದರೋಡೆ ಮಾಡಲಾಗಿತ್ತು.
ತಮಿಳುನಾಡಿನ ಕಾಂಚೀಪುರಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯನ್ನ ರಾಷ್ಟ್ರೀಯ ಹೆದ್ದಾರಿ-75ರ ದೇವರಾಯ ಸಮುದ್ರದ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನನ್ನ ಕಟ್ಟಿಹಾಕಿ, ಥಳಿಸಿ ಬಾಯಿಗೆ ಬಟ್ಟೆ ಇಟ್ಟು, ಲಾರಿ ಸಮೇತ ಪರಾರಿಯಾಗಿದ್ದರು.
ನಂತರ ಅದೇ ಹೆದ್ದಾರಿಯ ನೆರ್ನಹಳ್ಳಿ ಗೇಟ್ ಬಳಿ ಕಂಟೇನರ್ ನಿಲ್ಲಿಸಿ, ಬೇರೊಂದು ಲಾರಿಯಲ್ಲಿ ಮೊಬೈಲ್ ತುಂಬಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಕುಮಾರ್ ನೇತೃತ್ವದಲ್ಲಿ ನಾಲ್ಕು ಪೊಲೀಸ್ ತಂಡಗಳನ್ನ ರಚನೆ ಮಾಡಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳ ಪತ್ತೆಗೂ ಬಲೆ ಬೀಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm