ಬ್ರೇಕಿಂಗ್ ನ್ಯೂಸ್
25-09-21 02:12 pm Headline Karnataka News Network ಕ್ರೈಂ
ವಿಜಯಪುರ, ಸೆ.25: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಫೇಸ್ ಬುಕ್ ನಲ್ಲಿ ಹಾಕಿರುವ ವೀಡಿಯೋದಲ್ಲಿ ತನ್ನ ಸಾವಿಗೆ ಶ್ರೀ ಶೈಲ್ ಕಾರಣ ಎಂದು ವೆಂಕಟೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Husband Commits to Suicide Over Wife Illegal Affair in Vijayapura.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm