ಬ್ರೇಕಿಂಗ್ ನ್ಯೂಸ್
            
                        10-09-20 12:33 pm Bangalore Correspondent ಕ್ರೈಂ
            ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm