ಬ್ರೇಕಿಂಗ್ ನ್ಯೂಸ್
14-10-21 12:38 pm Mangaluru Correspondent ಕ್ರೈಂ
ಮಂಗಳೂರು, ಅ.14: ಕಚೇರಿಯಲ್ಲಿ ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ (45) ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವತಿ ಪಾಂಡೇಶ್ವರದ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕೆಲಸಕ್ಕಿದ್ದಳು. ಆಕೆಯನ್ನು ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ವಾಟ್ಸಪ್ ನಲ್ಲಿ ನಗ್ನ ಚಿತ್ರಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯ ಪಡಿಸುತ್ತಿದ್ದ. ಅಲ್ಲದೆ, ನಿನ್ನ ನಗ್ನ ಚಿತ್ರವನ್ನು ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇದಕ್ಕೆ ಸೊಪ್ಪು ಹಾಕದ ಯುವತಿ, ಆತನಿಂದ ದೂರವಿದ್ದಳು. ಈ ನಡುವೆ, ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆನಂತರ, ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಅಧಿಕಾರಿ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ರಾತ್ರಿ ಮೊಹಮ್ಮದ್ ಫಾರೂಕ್ ನನ್ನು ಬಂಧಿಸಿದ್ದಾರೆ. ಆತನ ವಿರುದ್ಧ 354 ಎ, 364 ಡಿ ಮತ್ತು 506 ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ. ಕಿರುಕುಳಕ್ಕೀಡಾದ ಸಂತ್ರಸ್ತೆ ಮುಸ್ಲಿಂ ಯುವತಿಯಾಗಿದ್ದು ಕಾಂಟ್ರಾಕ್ಟ್ ನೆಲೆಯಲ್ಲಿ ಪಾಂಡೇಶ್ವರದ ನಿಗಮದ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು.
Mangalore District Manager of DK district Minority Development Corporation has been arrested for sexual harassment. The arrested has been identified as Mohammed Farook (47). A 20-year-old girl was constantly sexually harassed. Based on her complaint the said Manager has been arrested by Mangalore Police.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm