ಬ್ರೇಕಿಂಗ್ ನ್ಯೂಸ್
22-10-21 02:43 pm Mangalore Reporter ಕ್ರೈಂ
ಉಡುಪಿ, ಅ.22 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸ್ನೇಹಿತರ ಜೊತೆ ಸೇರಿ ಪತ್ನಿಯೇ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದ ಪ್ರಕರಣದಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಪಾರಿನ ವಿವೇಕನಗರದ ನಾಗರಾಜ(36) ಅ.19 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪತ್ನಿ ಮಮತಾ ತನ್ನ ಗಂಡ ವಿಪರೀತ ಕುಡಿತದ ಚಟ ಹೊಂದಿದ್ದು ಅದೇ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿದ್ದರು ಎಂದು ದೂರು ನೀಡಿದ್ದಳು. ಇದೀಗ ಮಮತಾ ಮತ್ತು ಆಕೆಯ ಸ್ನೇಹಿತರಾದ ಕುಮಾರ್ ಮತ್ತು ದಿನಕರ್ ಅವರನ್ನು ಪೊಲೀಸರು ಬಂಧಿಸಿದ್ದು ಕೊಲೆ ನಡೆಸಿರುವುದನ್ನು ಪತ್ತೆ ಮಾಡಿದ್ದಾರೆ.

ವಿಪರೀತ ಮದ್ಯ ವ್ಯಸನಿಯಾಗಿದ್ದ ನಾಗರಾಜ್ ತನ್ನ ಜೀವನದ ಬಗ್ಗೆ ಜಿಗುಪ್ಸೆಗೊಂಡಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಮೃತರ ಸಹೋದರಿ ಶಿವಮೊಗ್ಗದ ಸಾಗರ ತಾಲೂಕಿನ ಮಾಲ್ವೆಯ ನಿವಾಸಿ ನಾಗರತ್ನ ಮತ್ತು ಇತರ ಕೆಲವು ಸಂಬಂಧಿಕರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ಶಂಕರನಾರಾಯಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದಲ್ಲಿ ಕತ್ತಿನ ಭಾಗದಲ್ಲಿ ಗಾಯದ ಗುರುತು ಇರುವುದನ್ನು ಕುಟುಂಬ ಸದಸ್ಯರು ಗಮನಿಸಿದ್ದು ಕೊಲೆ ಬಗ್ಗೆ ಶಂಕಿಸಿ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೂ ಮುನ್ನ ನಾಗರಾಜ್ ತನ್ನ ಪತ್ನಿ ಮತ್ತು ಇತರರು ಸೇರಿ ತನಗೆ ಹಲ್ಲೆ ನಡೆಸಿದ್ದಾಗಿ ಸಹೋದರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು. ಇದೇ ಶಂಕೆಯಲ್ಲಿ ನಾಗರತ್ನ ದೂರಿನಲ್ಲಿ ತಿಳಿಸಿದ್ದರು. ನಾಗರಾಜ್ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಮಮತಾಳನ್ನು ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ ನಾಗರಾಜ್ ನಿತ್ಯ ಕುಡುಕನಾಗಿದ್ದು, ಮನೆಯಲ್ಲಿ ದಿನವೂ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು ಇಬ್ಬರು ಅಪ್ರಾಪ್ತರಾಗಿದ್ದು ರಿಮಾಂಡ್ ಹೋಮ್ ಗೆ ಕಳಿಸಲಾಗಿದೆ. ಮಮತಾಗೆ ಆರೋಪಿಗಳ ಜೊತೆ ಅಕ್ರಮ ಸಂಬಂಧ ಇತ್ತೆನ್ನುವ ಅನುಮಾನ ಉಂಟಾಗಿದ್ದು ಶಂಕರನಾರಾಯಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
What was believed to be a case of suicide, reported four days ago, has taken a new twist with the arrest of five accused including wife and two minors under the Shankernarayana Police station limits of Byndoor Taluk.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm