ಬ್ರೇಕಿಂಗ್ ನ್ಯೂಸ್
11-11-21 10:11 am HK News Desk ಕ್ರೈಂ
ಶಿವಮೊಗ್ಗ, ನ 11: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
2106ರಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ.
"ನಾನು ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ" ಎಂದು ನಂಬಿಸಿದ್ದಾನೆ. ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್ ಊರಿಗೆ ಹೋಗಿ ಹಣ ಕೇಳಿದಾಗ 1 ಲಕ್ಷ ರೂ. ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ. ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga KSRTC Driver has been cheated of 15 Lakhs by Man stating himself as DK Shivakumar PA. A case has been registered against him, police are now on the search for the accused.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am