ಬ್ರೇಕಿಂಗ್ ನ್ಯೂಸ್
16-11-21 08:08 am Mangaluru Correspondent ಕ್ರೈಂ
ಮಂಗಳೂರು, ನ.16: ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ.
ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು. ಇವರು ಮುಕ್ಕದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಸಂಜೆಯ ವಿಹಾರ ಮುಗಿಸಿ ರಾತ್ರಿ ಹತ್ತು ಗಂಟೆ ವೇಳೆಗೆ ಹುಡುಗಿಯನ್ನು ಬೈಕಿನಲ್ಲಿ ಇಡ್ಯಾದ ಕಲ್ಯಾಣಿ ಪರ್ಲ್ ಅಪಾರ್ಟ್ ಮೆಂಟಿಗೆ ಬಿಡಲು ತೆರಳುತ್ತಿದ್ದ.



ಬೈಕ್ ಅಪಾರ್ಟ್ಮೆಂಟ್ ತಲುಪುತ್ತಿದ್ದಂತೆ ತಡೆದು ನಿಲ್ಲಿಸಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿಮ್ಮ ಹೆಸರೇನೆಂದು ಕೇಳಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿಯನ್ನು ಕೈಯಲ್ಲಿ ಹಿಡಿದು ನೆಲಕ್ಕೆ ದೂಡಿ ಹಾಕಿದ್ದು ನಿನಗೆ ಬ್ಯಾರಿಯೇ ಆಗಬೇಕಾ ಎಂದು ಪ್ರಶ್ನಿಸಿ ನಿಂದಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್ , ಪ್ರತೀಶ್, ಭರತ್, ಸುಕೇಶ್ ಎಂದು ಗುರುತಿಸಲಾಗಿದೆ.
ಎರಡು ತಿಂಗಳ ಹಿಂದೆ ಸುರತ್ಕಲ್ ಪೇಟೆಯಲ್ಲಿ ಇದೇ ರೀತಿ ಬೊಲೆರೋ ಜೀಪಿನಲ್ಲಿ ಮಲ್ಪೆ ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದ ವಿದ್ಯಾರ್ಥಿ - ವಿದ್ಯಾರ್ಥಿನಿಯರಿದ್ದ ತಂಡದ ಮೇಲೆ ಹಿಂದು ಸಂಘಟನೆಯ ಯುವಕರು ದಾಳಿ ನಡೆಸಿದ್ದರು. ಪೊಲೀಸ್ ಅಧಿಕಾರಿಯ ಮುಂದೆಯೇ ಘಟನೆ ನಡೆದಿತ್ತು. ಇದೀಗ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲೇ ಮತ್ತೊಂದು ಕೃತ್ಯ ನಡೆದಿದೆ. ಹಿಂದು ಹುಡುಗಿ ಎಂದು ನಂಬಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Another Moral Policing case reported in Surathkal seven have been arrested by Surathkal Police. Girl who was travelling with Muslim guy on the bike was stopped, abused and assulted.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm