ಬ್ರೇಕಿಂಗ್ ನ್ಯೂಸ್
22-11-21 07:41 pm HK News Desk ಕ್ರೈಂ
ಬೆಂಗಳೂರು, ನ.22 : ‘ಇನ್ಸ್ಟಾಗ್ರಾಮ್' ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಗಿಫ್ಟ್ ಕಳುಹಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 45 ಲಕ್ಷ ರೂ. ಪೀಕಿಸಿಕೊಂಡು ಪಂಗನಾಮ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ವರ್ತೂರು ನಿವಾಸಿ 30 ವರ್ಷದ ಮಹಿಳೆಗೆ ಅಲೆಕ್ಸ್ ಎರಿನ್ ಎಂಬ ಹೆಸರಿನ ವ್ಯಕ್ತಿ ‘ಇನ್ಸ್ಟಾಗ್ರಾಮ್' ನಲ್ಲಿ ಪರಿಚಯವಾಗಿದ್ದ. ತಾನು ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದಾಗಿ ಹೇಳಿಕೊಂಡು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಇದನ್ನು ನಂಬಿದ್ದ ಮಹಿಳೆ, ಗೆಳೆತನಕ್ಕೆ ಒಪ್ಪಿ ಚಾಟಿಂಗ್ ಆರಂಭಿಸಿದ್ದರು. ಈ ನಡುವೆ ಆರೋಪಿ ತಮ್ಮ ಸ್ನೇಹದ ನೆನಪಿಗಾಗಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ. ಅದಕ್ಕೆ ಮಹಿಳೆ ಸಮ್ಮತಿಸಿದ್ದರು. ಅದರಂತೆ ಸೆ.30ರಂದು ಮಹಿಳೆಗೆ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ, ತಾನು ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ವಿದೇಶದಿಂದ ಬೆಲೆಬಾಳುವ ಡೈಮಂಡ್ ಉಡುಗೊರೆ ಬಂದಿರುವುದಾಗಿ ಹೇಳಿದ್ದ. ಅದನ್ನು ಸ್ವೀಕರಿಸಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಸೂಚಿಸಿದ್ದು ಶುಲ್ಕ ತುಂಬದಿದ್ದರೆ ಜೈಲು ಶಿಕ್ಷೆಯಾಗುವುದಾಗಿ ಮಹಿಳೆಯನ್ನು ಹೆದರಿಸಿದ್ದ.
ಆರೋಪಿಯ ಮಾತು ನಂಬಿದ ಮಹಿಳೆ, ಆತ ಹೇಳಿದ್ದ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ಹಂತ ಹಂತವಾಗಿ 45.31 ಲಕ್ಷ ರೂ. ಪಾವತಿಸಿದ್ದರು. ಆದರೆ ಹಣ ಪಡೆದ ಆರೋಪಿಗಳು ಯಾವುದೇ ಉಡುಗೊರೆ ಕಳುಹಿಸಿಲ್ಲ. ಅಲ್ಲದೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ವಂಚನೆಗೊಳಗಾದ ಮಹಿಳೆ ನೀಡಿರುವ ದೂರಿನಂತೆ ಆರೋಪಿಗಳಾದ ಅಲೆಕ್ಸ್ ಎರಿಕ್, ವೀರ್ ಪಾಲ್, ಬೆನ್ ಹಾಗೂ ಮಥುರಾ ಅನಿವರ್ ಎಂಬವರ ವಿರುದ್ಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Bangalore Woman Cheated of 45 lakhs on Instagram
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm