ಬ್ರೇಕಿಂಗ್ ನ್ಯೂಸ್
23-11-21 10:36 pm HK news Desk ಕ್ರೈಂ
ಮಂಗಳೂರು, ನ.23: ನಗರ ಹೊರವಲಯದ ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಕುಟುಂಬದ ಎಂಟು ವರ್ಷದ ಹೆಣ್ಣು ಮಗುವಿನ ಪೈಶಾಚಿಕ ಕೊಲೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಕೊಲೆಗೂ ಮುನ್ನ ಅತ್ಯಂತ ವಿಕೃತವಾಗಿ ಗ್ಯಾಂಗ್ ರೇಪ್ ನಡೆಸಿದ್ದಾರೆಂಬ ಮಾಹಿತಿ ಪೊಲೀಸ್ ತನಿಖೆಯಲ್ಲಿ ಲಭ್ಯವಾಗಿದೆ.
ಇಬ್ಬರು ಅಥವಾ ಮೂರು ಮಂದಿ ಸೇರಿ ಏಕಕಾಲದಲ್ಲಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಅನ್ನುವ ಮಾಹಿತಿಗಳು ತನಿಖೆಯಲ್ಲಿ ತಿಳಿದುಬಂದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಡ ಕುಟುಂಬದ ಯುವತಿಯ ಮೇಲೆ ಕಣ್ಣಿಟ್ಟಿದ್ದ ಕಾಮುಕರು, ಭಾನುವಾರ ಸಂಜೆ ಹೊತ್ತಿಗೆ ಆಟವಾಡುತ್ತಿದ್ದಾಕೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ
ಅತ್ಯಂತ ವಿಕೃತ ಮತ್ತು ಪೈಶಾಚಿಕ ರೀತಿಯಲ್ಲಿ ಕೃತ್ಯ ಎಸಗಿದ್ದರಿಂದ ಮಗುವಿಗೆ ಆಘಾತ ಆಗಿದ್ದು, ಆನಂತರ ಉಸಿರುಗಟ್ಟಿಸಿ ಕೊಲೆ ನಡೆಸಿದ್ದಾರೆ. ಕೃತ್ಯದ ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ನೀರು ಹರಿಯುವ ಚರಂಡಿಗೆ ಎಸೆದಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಹೆಣ್ಮಗು ಇಲ್ಲದಿರುವ ವಿಷಯ ಗೊತ್ತಾಗುತ್ತಲೇ ಹೆತ್ತವರು ಹುಡುಕಾಟ ಆರಂಭಿಸಿದ್ದರು. ಆದರೆ, ಟೈಲ್ಸ್ ಫ್ಯಾಕ್ಟರಿಯ ಸ್ವಲ್ಪ ದೂರದಲ್ಲಿರುವ ನೀರು ಹರಿಯುವ ಗುಂಡಿಯಲ್ಲಿ ಮಗುವಿನ ಶವ ಆರು ಗಂಟೆ ಸುಮಾರಿಗೆ ಲಭಿಸಿದ್ದು, ಬಳಿಕ ಪೊಲೀಸರು ಬಂದು ತನಿಖೆ ನಡೆಸಿದ್ದಾರೆ.
ಟೈಲ್ಸ್ ಫ್ಯಾಕ್ಟರಿಯಲ್ಲಿ ದಿನವೂ 30 ಜನರು ಕೆಲಸ ಮಾಡುತ್ತಿದ್ದರು. ಮೊನ್ನೆ ಭಾನುವಾರ ಆಗಿದ್ದರಿಂದ 19 ಜನ ಬಂದಿದ್ದರು ಎನ್ನಲಾಗಿದೆ. 20 ಜನ ಉತ್ತರ ಭಾರತೀಯ ಮತ್ತು ಉತ್ತರ ಕರ್ನಾಟಕ ಮೂಲದವರಾಗಿದ್ದು ಹತ್ತು ಮಂದಿ ಸ್ಥಳೀಯ ಕಾರ್ಮಿಕರು ಕೂಡ ಅಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳೀಯರು ಮಾತ್ರ ಅಂದು ರಜೆ ಪಡೆದಿದ್ದರು. ಕೃತ್ಯವನ್ನು ಉತ್ತರ ಭಾರತೀಯರೇ ಎಸಗಿದ್ದಾರೆ ಎನ್ನಲಾಗುತ್ತಿದೆ. ಕೃತ್ಯ ನಡೆದಿರುವ ದಿನವೇ 10ರಿಂದ 15 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಸಾಕ್ಷ್ಯಗಳನ್ನು ಕಲೆಹಾಕಿ ಬಂಧನ ಪ್ರಕ್ರಿಯೆ ನಡೆಸಲಿದ್ದಾರೆ. ಉತ್ತರ ಭಾರತೀಯ ಕುಟುಂಬಗಳು ಟೈಲ್ಸ್ ಫ್ಯಾಕ್ಟರಿ ಪಕ್ಕದಲ್ಲಿಯೇ ಕಟ್ಟಡವೊಂದರಲ್ಲಿ ವಾಸವಿದ್ದರು.
2014ರಲ್ಲಿ ನಿರ್ಭಯಾ ಪ್ರಕರಣದ ಬಳಿಕ ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಹೊಸ ಕಾನೂನು ತರಲಾಗಿದೆ. ಹೀಗಾಗಿ ಈ ಪರಿಯ ಪೈಶಾಚಿಕ ಕೃತ್ಯಗಳಿಗೆ ಕೊಂಚ ಕಡಿವಾಣ ಬಿದ್ದಿದೆ ಎನ್ನುತ್ತಿರುವಾಗಲೇ ಮಗುವಿನ ಜೊತೆ ಕ್ರೂರವಾಗಿ ನಡೆದುಕೊಂಡಿರುವ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
Eight year old girl murder in Parai village Mangalore girl brutally gang raped says medical report. Several have been detained by the police and investigation is in progress.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am