ಬ್ರೇಕಿಂಗ್ ನ್ಯೂಸ್
02-12-21 10:58 pm Mangaluru Correspondent ಕ್ರೈಂ
ಮಂಗಳೂರು, ಡಿ.2: ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಅಂತಾರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿರುವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
2020ರ ಮೇ ತಿಂಗಳಲ್ಲಿ ಅಡ್ಡೂರು ಗ್ರಾಮದ ಪಲ್ಲಂಗಡಿ ಎಂಬಲ್ಲಿ ಅಹ್ಮದ್ ಬಾವ ಎಂಬವರ ಮನೆಯ ಕಿಟಕಿ ಮುರಿದು ಕಳ್ಳರು ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಬ್ಬಾಸ್, ಇಬ್ರಾಹಿಂ, ನಜೀರ್ ಇತ್ಯಾದಿ ಹೆಸರುಗಳಲ್ಲಿ ಕರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ ನನ್ನು ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಅಬ್ಬಾಸ್, ಕಳೆದ ಒಂದೂವರೆ ವರ್ಷದಲ್ಲಿ ಬೆಳ್ತಂಗಡಿ, ಕಡಬ. ರಾಮಕುಂಜ, ಪುತ್ತೂರು, ಉಳ್ಳಾಲ ಹೀಗೆ ಹಲವು ಕಡೆಗಳಲ್ಲಿ ವಾಸವಿದ್ದು, ವಾಸವನ್ನು ಬದಲಾಯಿಸುತ್ತಾ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಬ್ಬಾಸ್ ವಿರುದ್ಧ ಕೊಣಾಜೆ, ಉಳ್ಳಾಲ, ಬೆಳ್ತಂಗಡಿ, ಕಾಸರಗೋಡು ಜಿಲ್ಲೆಯ ಕುಂಬಳೆ, ಮಂಜೇಶ್ವರ ಠಾಣೆಗಳಲ್ಲಿ ಮನೆ ಕಳ್ಳತನ, ಗ್ಯಾಸ್ ಸಿಲಿಂಡರ್ ಕಳವು, ಬೈಕ್ ಕಳವು, ಬೀಟೆ ಮರ ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ವಿಚಾರಣೆ ವೇಳೆ ಗಂಜಿಮಠದಲ್ಲಿ ಜೆಸಿಂತಾ ಎಂಬವರ ಡಿಕುನ್ನ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಕಳವಿಗೆ ಯತ್ನಿಸಿರುವ ಬಗ್ಗೆ ತಿಳಿಸಿದ್ದಾನೆ. ಬಜ್ಪೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Interstate Robber Arrested by Bajpe Police in Mangalore. The arrested has been identified as Abbas.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm