ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm