ಬ್ರೇಕಿಂಗ್ ನ್ಯೂಸ್
12-01-22 06:30 pm HK Desk news ಕ್ರೈಂ
ಬೆಂಗಳೂರು, ಜ.12 : ದಾಳಿ ಮಾಡುವ ಸೋಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸ್ ಪೇದೆಗಳಿಬ್ಬರು ಭಾರೀ ಬೆಲೆಯ ರಕ್ತಚಂದನವನ್ನು ದರೋಡೆ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದ್ದು ಇಬ್ಬರು ಹೆಡ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ.
ಗಿರಿನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೋಹನ್, ಮಹದೇವಪುರ ಹೆಡ್ ಕಾನ್ಸ್ಟೇಬಲ್ ಮಮತೇಶ್ ಗೌಡ ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಅಮಾನತುಗೊಂಡವರು. ಇವರಿಬ್ಬರು 2018 ರಿಂದ ಸಿಸಿಬಿಯಲ್ಲಿ ಕೆಲಸ ಮಾಡುತ್ತಿದ್ದು ಒಂದು ತಿಂಗಳ ಹಿಂದಷ್ಟೇ ಸಿಸಿಬಿಯಿಂದ ಸ್ಥಳೀಯ ಠಾಣೆಗಳಿಗೆ ವರ್ಗಾವಣೆಯಾಗಿದ್ದರು. ಸಿಸಿಬಿಯಲ್ಲಿದ್ದ ವೇಳೆ ರಕ್ತ ಚಂದನದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರಿಗೂ ರಕ್ತಚಂದನ ದರೋಡೆ ಅಡ್ಡೆ ಹಾಗೂ ಗ್ಯಾಂಗ್ಗಳ ಬಗ್ಗೆ ತಿಳಿದಿತ್ತು.
ಮೋಹನ್, ಮಮತೇಶ್ ಡಿಸೆಂಬರ್ 15 ರಂದು ಕಾರಿನಲ್ಲಿ ಹೊಸಕೋಟೆ ಸಂತೆ ಸರ್ಕಲ್ ಬಳಿ ದಾಳಿ ಎಸಗಿದ್ದರು. ಈ ವೇಳೆ ಟಾಟಾ ಏಸ್ನಲ್ಲಿ ತರುತ್ತಿದ್ದ ರಕ್ತ ಚಂದನವನ್ನು ಸೀಜ್ ಮಾಡಿದ್ದು ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಆದರೆ 5 ದಿನಗಳ ನಂತರ ಸ್ಥಳೀಯರು ಹೊಸಕೋಟೆ ಪೊಲೀಸರಿಗೆ ವಿಚಾರ ತಿಳಿಸಿದ್ದರು. ಹೊಸಕೋಟೆ ಪೊಲೀಸರು ಎಫ್ಐಆರ್ ದಾಖಲಿಸಿ, ಆರೋಪಿಗಳ ಪತ್ತೆಗೆ ಹುಡುಕಾಡುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇಬ್ಬರು ಪೇದೆಗಳು ಪರಾರಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮೋಹನ್ ಮತ್ತು ಮಮತೇಶ್ ಅವರನ್ನು ಅಮಾನತು ಮಾಡಲಾಗಿದೆ. ಐಜಿಪಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅಮಾನತುಗೊಂಡು 20 ದಿನ ಕಳೆದರೂ ಹೆಡ್ ಕಾನ್ಸ್ಟೇಬಲ್ಗಳ ಬಂಧನವಾಗಿಲ್ಲ.
ಕೃತ್ಯ ಹೇಗೆ ಎಸಗುತ್ತಿದ್ದರು?
ಮೋಹನ್, ಮಮತೇಶ್ಗೆ ಸಿಸಿಬಿಯಲ್ಲಿದ್ದ ವೇಳೆ ರಕ್ತ ಚಂದನದ ಸ್ಮಗ್ಲಿಂಗ್ ಅಡ್ಡೆಗಳ ಪರಿಚಯ ಆಗಿತ್ತು. ಅಲ್ಲದೇ ಆಂಧ್ರದಲ್ಲಿ ರಕ್ತಚಂದನದ ಮರ ಕಡಿಯಲು ಬೆಂಗಳೂರಿನಿಂದ ಕೂಲಿಗೆ ಜನ ಹೋಗುತ್ತಾರೆ. ಅಂತಹವರನ್ನು ಮೋಹನ್, ಮಮತೇಶ್ ಪೊಲೀಸ್ ಬಾತ್ಮೀದಾರರಾಗಿ ಬಳಸಿಕೊಳ್ಳುತ್ತಿರುತ್ತಾರೆ. ರಕ್ತಚಂದನದ ಮರ ಕಡಿಯಲು ಬೆಂಗಳೂರಿನಿಂದ ಹೋದವರು ಮರ ಕಡಿದು ಲಾರಿಗೆ ತುಂಬಿಸುತ್ತಿದ್ದಂತೆ, ಲಾರಿಯ ನಂಬರ್ ಹಾಗೂ ಲಾರಿಯಲ್ಲಿ ಎಷ್ಟು ಲೋಡ್ ಇದೆ? ವಾಹನ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಸ್ಮಗ್ಲರ್ ಗಳು ಈ ಇಬ್ಬರು ಪೊಲೀಸರಿಗೆ ನೀಡುತ್ತಿದ್ದರು.
ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ರಕ್ತ ಚಂದನ ವಶಕ್ಕೆ ಪಡೆಯುತ್ತಿದ್ದರು. ನಂತರ ಅದನ್ನು ಯಾರಿಗೂ ತೋರಿಸದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ರೀತಿ ಹಣಗಳಿಸಿರುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
Bangalore Two Police Constables have been arrested for robbery and smuggling of Sandalwood, the accused have done the crime just as the Movie Pushapa deals with smuggling of Sandalwood. Both are said to be constables of Girinagar Police Station.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm